NEWSಶಿಕ್ಷಣ-

ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಎಸ್‌ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಲಾಗುವುದು.

ಇನ್ನು ಮಕ್ಕಳನ್ನು ದಾಖಲು ಮಾಡಿಕೊಂಡ ವಿದ್ಯಾಸಂಸ್ಥೆಗಳು/ ಶಾಲೆಗಳಿಗೆ ಭರಿಸಬೇಕಾದ ಎಲ್ಲ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಷರತ್ತುಗಳು ಏನು? ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 9.05.2024 ಹಾಗೂ ಕೊನೆಯ ದಿನಾಂಕ 21.05.2024 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು