Please assign a menu to the primary menu location under menu

NEWSನಮ್ಮಜಿಲ್ಲೆಶಿಕ್ಷಣ-

ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಹಾಗೂ ಇತರೆ ವರ್ಗಗಳ ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ, ವಿಕಲಚೇತನರಿಗೆ ಶೇ.3ರಷ್ಟು ಪ್ರವೇಶ ಮೀಸಲಿರಿಸಿದೆ.

ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ (NETT/JEE(Mains & Advanced)KCET) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಪ್ರಥಮ ಪಿಯುಸಿ ಸಹ ಶಿಕ್ಷಣ (PCMB) ತರಗತಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿಯನ್ನು ಪ್ರಾಂಶುಪಾಲರಿಂದ ಪಡೆದು, ಸಂಬಂಧಪಟ್ಟ ಪ್ರಾಂಶುಪಾಲರು, ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲೂಕು ಅವರಿಗೆ 27/05/2023 ರೊಳಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲೂಕು, ದೂರವಾಣಿ ಸಂಖ್ಯೆ-9632933397, 8660971267, 9972238296, 9980903199 ಅಥವಾ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲೂಕು ಮಾಹಿತಿ ಕೇಂದ್ರ, ಹೊಸಕೋಟೆ. ದೂರವಾಣಿ ಸಂಖ್ಯೆ- ದೂ:080-27931899, ಮೊ.8310397004.

ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455. ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...