SC,ST ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಡಾ. ಬಾಬುಜೀ, ಡಾ. ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ


ಬೆಂಗಳೂರು ಗ್ರಾಮಾಂತರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ್ ರಾಂ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಕಾರ್ಯಕ್ರಮದ ಅಂಗವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯಕ್ಕಾಗಿ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಜಿಲ್ಲಾ ಮಟ್ಟದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಆಸಕ್ತರು ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮಾ.15 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ದೂ.ಸಂ. 29787447, ದೇವನಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ಸಂ: 27681784, ದೊಡ್ಡಬಳ್ಳಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ಸಂ: 27623681.
ಹೊಸಕೋಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ಸಂ: 27931528, ನೆಲಮಂಗಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ಸಂ: 27723172ರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
Related









