NEWSನಮ್ಮರಾಜ್ಯಸಂಸ್ಕೃತಿ

ಸರಳ ವಿವಾಹ ಪ್ರೋತ್ಸಾಹಧನ 50 ಸಾವಿರ ರೂ. ಕೊಡಲು ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹಧನ ಪಡೆಯಲು ಮದುವೆ ದಿನಾಂಕದ 03 ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.

ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.

ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು 2.50 ಲಕ್ಷ ರೂ.ಗಳು ಮತ್ತು ಒಟ್ಟಾರೆಯಾಗಿ 5 ಲಕ್ಷ ರೂ.ಗಳನ್ನು ಮೀರತಕ್ಕದ್ದಲ್ಲ. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.

ಜಿಲ್ಲಾ ನೋಂದಣಿ/ ವಕ್ಸ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್‌ಗಳು, ದೇವಸ್ಥಾನದ ಟ್ರಸ್ಟ್‌ಗಳು, ಸಂಘಗಳು, ಸೊಸೈಟಿಗಳು, ವಕ್ಸ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು. ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು.

ವಿಧವೆ ತಾಯಿಯ ಕುಟುಂಬ/ ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 5000 ರೂ.ಗಳನ್ನು ನೀಡುವುದು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!