NEWSಕೃಷಿನಮ್ಮಜಿಲ್ಲೆ

ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್‌ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ