NEWSನಮ್ಮಜಿಲ್ಲೆಸಂಸ್ಕೃತಿ

ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ ಕಲಾವಿದರು ಅಥವಾ ಕಲಾ ತಂಡದವರು ಸೆಪ್ಟೆಂಬರ್‌ 6 ಒಳಗೆ ಅರ್ಜಿ ಸಲ್ಲಿಸಬಹುದು.

2025 26 ನೇ ಸಾಲಿನಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ನಡೆಯುವ ದಸರಾ ಮಹೋತ್ಸವವನ್ನು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ಆಚರಿಸಲು ತೀರ್ಮಾನಿಸಲಾಗಿದೆ ಈ ಸಂಬಂಧ 14 ದಸರಾ ಸಮಿತಿಗಳನ್ನು ಸಹ ರಚಿಸಲಾಗಿದೆ.

ಹತ್ತು ದಿನಗಳ ಕಾಲ ನಡೆಯುವ ಈ ದಸರಾ ಸಮಿತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕಳೆದು ಶಿವಪ್ಪ ನಾಯಕ ಅರಮನೆ, ಕುವೆಂಪು ರಂಗ ಮಂದಿರ ಡಾ.ಬಿ.ಆರ್. ಅಂಬೇಡ್ಕರ್ ಭವನ ಅಲ್ಲಮಪ್ರಭು ಉದ್ಯಾನವನ ಹಾಗೂ ಇತರ ವೇದಿಕೆಗಳಲ್ಲಿ ಆಯೋಜಿಸಲಾಗುತ್ತಿದೆ.

14 ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡ ಬಯಸುವ ಕಲಾವಿದರಿಗೆ ಅಥವಾ ಕಲಾತಂಡಗಳಿಗೆ ಸೆಪ್ಟೆಂಬರ್‌ 6 ಒಳಗೆ ಶಿವಮೊಗ್ಗ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇ-ಮೇಲ್ shivamoggaccdasara@gmail.com ಮೂಲಕ ಅಥವಾ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿರುವ ದಸರಾ ಶಾಖೆಗೆ ಸಂಪರ್ಕಿಸಬಹುದಾಗಿದೆ.

Megha
the authorMegha

Leave a Reply

error: Content is protected !!