Please assign a menu to the primary menu location under menu

NEWSನಮ್ಮಜಿಲ್ಲೆಶಿಕ್ಷಣ-

ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ ಶಾಲೆಗಳಿಗೆ ಭರಿಸಬೇಕಾದ ಎಲ್ಲ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಷರತ್ತುಗಳು : 1. ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. 2. 2023-24ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು. 3. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.2,50,000/-ಗಳ ಒಳಗಿರಬೇಕು. ತಹಶಿಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು.

4. ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯವರೆಗೆ ದಾಖಲಾದ ವಿದ್ಯಾಸಂಸ್ಥೆಯಲ್ಲಿಯೇ ವ್ಯಾಸಂಗ ಮುಂದುವರೆಸುವುದು. 5. 10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಪ್ರತಿಷ್ಠಿತ ಶಾಲೆಯಲ್ಲಿ ಪಿ.ಯು.ಸಿ. ತರಗತಿಗಳನ್ನು ನಡೆಸದೇ ಇದ್ದಲ್ಲಿ, ಅದೇ ಜಿಲ್ಲೆಯಲ್ಲಿನ ಪಿ.ಯು.ಸಿ. ಇರುವ ಪ್ರತಿಷ್ಠಿತ ಶಾಲೆ/ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.

 6. ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆದುಕೊಳ್ಳಬಹುದಾಗಿದೆ. 7. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21.05.2024 ರವರೆಗೆ ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.

 8. ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. 9. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.

ಪೌರ ಕಾರ್ಮಿಕರ ಮಕ್ಕಳು, ಸಫಾಯಿ ಕರ್ಮಚಾರಿಗಳವರ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿರವರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು, ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಪ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಯಲ್ಲಿ ವಾಸಿಸುತ್ತಿರುವವರ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲ ಬಾDeಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್