NEWSಉದ್ಯೋಗನಮ್ಮಜಿಲ್ಲೆ

ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಪಂಚಾಯಿತಿಯ ಅನಿರ್ಬಂಧೀತ ಅನುದಾನದಲ್ಲಿ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಗಳನ್ನು ವಿತರಿಸಲು ಸೇವಾ ಸಿಂಧು ಪೊರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು ( https://sevasindhu.Karnataka.gov.in/ ) ಪೊರ್ಟಲ್‌ನಲ್ಲಿ ಸೆಪ್ಟೆಂಬರ್ 06, 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿ (ಯುಡಿಐಡಿ ಕಾರ್ಡ್)ಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು, ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೆ ಎಲ್ಲ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು. ಆಸಕ್ತ ದೈಹಿಕ ವಿಕಲಚೇತನರು ಸರ್ಕಾರದಿಂದ ಯಾವುದೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!