NEWSಕ್ರೀಡೆದೇಶ-ವಿದೇಶನಮ್ಮರಾಜ್ಯ

ಭೋಪಾಲ್‌ನಲ್ಲಿ ದೆಹಲಿ ಚಲೋ ಅಭಿಯಾನಕ್ಕೆ ತೆರಳುತ್ತಿದ್ದ ರಾಜ್ಯದ ರೈತರ ಬಂಧನ ಖಂಡನೀಯ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿಯಲ್ಲಿ ನಾಳೆ (ಫೆ.13) ದೆಹಲಿ ಚಲೋ ಅಭಿಯಾನಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯದ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿಸಿ ಸಿಎಂ, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದರು.

ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಹೇಳಿದರು.

ಇನ್ನು ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು.

ಇನ್ನು ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ