NEWSದೇಶ-ವಿದೇಶನಮ್ಮರಾಜ್ಯ

ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ: ಕೇಜ್ರಿವಾಲ್‌ಗೆ ಜಾಮೀನು ಎಎಪಿ ಬೆಂಗಳೂರು ಕಚೇರಿಯಲ್ಲಿ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಗೆಲುವಾಗಿದೆ. ಪ್ರಜಾಪ್ರಭುತ್ವದ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿಯ ಸೋಲಿನ ಮುನ್ಸೂಚನೆಯಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಹರ್ಷ ವ್ಯಕ್ತಪಡಿಸಿದರು.

ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಕೊಟ್ಟ ಬೆನ್ನಲ್ಲೇ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ನಿರೀಕ್ಷೆಯಂತೆ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ. ಕೇಜ್ರಿವಾಲ್ ಬಂಧನ ಪ್ರಧಾನಿ ಮೋದಿಯವರ ದೊಡ್ಡ ಹುನ್ನಾರ ಎಂಬುದು ಜಗಜ್ಜಾಹೀರಾಗಿದೆ ಎಂದರು.

ಚುನಾವಣೆಯಲ್ಲಿ ಎಎಪಿಯನ್ನು ಕಟ್ಟಿಹಾಕುವ ಸಲುವಾಗಿ ಚುನಾವಣೆಯ ಹೊಸ್ತಿಲಲ್ಲಿ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದರು ಎಂಬ ಸತ್ಯ ಭಾರತದ ಜನತೆಗೆ ಅರಿವಾಗಿದೆ. ಮೂರು-ಮೂರು ಬಾರಿ ಪ್ರಚಂಡ ಬಹುಮತದಿಂದ ಗೆದ್ದಿರುವ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ವಿರುದ್ಧ ಅಣಕವಾಡಿದ್ದ ಮೋದಿಗೆ ತಕ್ಕ ಶಾಸ್ತಿಯಾಗುವ ದಿನಗಳು ಹತ್ತಿರವಾಗಿವೆ ಎಂದರು.

ಇನ್ನು ಜೈಲಿನ ಕಂಬಿಗಳು ಮುರಿದಿವೆ, ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ. ಈ ಬಾರಿಯ ಚುನಾವಣೆಯಲ್ಲಿ ಕೇಜ್ರಿವಾಲ್ ಅಲೆಯನ್ನು ತಡೆಯಲು ಪ್ರಧಾನಿ ಮೋದಿಗೆ ಇನ್ಯಾವ ದಾರಿಯು ಉಳಿದಿಲ್ಲ. ಇಂಡಿಯಾ ಒಕ್ಕೂಟದ ಗೆಲುವನ್ನು ತಡೆಯುವ ಮೋದಿಯವರ ಹುನ್ನಾರ ನುಚ್ಚುನೂರಾಗಿದೆ ಎಂದು ಹೇಳಿದರು.

ದೆಹಲಿಯ ಜನರಲ್ಲಿ ಮಿಂಚಿನ ಸಂಚಾರವಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ನೂರ್ಮಡಿ ಶಕ್ತಿಯ ಸಂಚಲನವಾಗಿದೆ. ಮೇ 25ರಂದು ದೆಹಲಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ, ಕೇಜ್ರಿವಾಲ್ ಅವರ ಉಪಸ್ಥಿತಿಯಿಂದ ಇಂಡಿಯಾ ಒಕ್ಕೂಟವು 7ಕ್ಕೆ 7 ಸ್ಥಾನವನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರು.

ಇನ್ನು ಕೇಜ್ರಿವಾಲ್ ಅವರು ಇಂದೇ ಜೈಲಿನಿಂದ ಹೊರಬರಲಿದ್ದಾರೆ. ಚುನಾವಣೆ ಪ್ರಚಾರದ ದಿಕ್ಕೇ ಬದಲಾಗಲಿದೆ. ಕೇಜ್ರಿವಾಲ್ ಹೊರಬರುತ್ತಿರವ ವಿಚಾರ ಬಿಜೆಪಿ ಪಾಳಯದಲ್ಲಿ ನಡುಕ ಹುಟ್ಟಿಸಿದೆ. 3 ಹಂತದ ಮತದಾನ ಮುಗಿದಿರುವ ಈ ಸಂದರ್ಭದಲ್ಲೇ ಸೋಲಿನ ಭೀತಿಯಲ್ಲಿ ಮಾನಸಿಕ ಅಸ್ವಸ್ಥರಂತೆ ಭಾಷಣ ಮಾಡುತ್ತಿರುವ ಮೋದಿಯವರು ಕೇಜ್ರಿವಾಲ್ ಬಿಡುಗಡೆಯಿಂದ ಸಂಪೂರ್ಣ ಸ್ಥಿಮಿತ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಕೇಜ್ರಿವಾಲ್ ಬಿಡುಗಡೆಯಿಂದ ಇನ್ನುಳಿದ ನಾಲ್ಕು ಹಂತಗಳ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಇಂಡಿಯಾ ಅಭ್ಯರ್ಥಿಗಳಲ್ಲಿ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿ ಪಕ್ಷದ ಕಚೇರಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಡಾ. ಸತೀಶ್ ಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಎಲ್ಲರೂ ಸೇರಿ ಸಿಹಿ ಹಂತಿ ಸಂಭ್ರಮಾಚರಣೆ ನಡೆಸಿದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್