ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಚೇರಿಯಿಂದ 25 ಕಿಲೋಮೀಟರ್ ದೂರದಲ್ಲಿರುವ ಮಿಂಗಿಂಗ್ ಗ್ರಾಮದ ಬಳಿ ಶುಕ್ರವಾರ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ಸುಧಾರಿತ ಲಘು ಹೆಲಿಕಾಪ್ಟರ್ (ALH) ಇಂದು ಬೆಳಗ್ಗೆ 10:40 ರ ಸುಮಾರಿಗೆ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರದೇಶದ ಬಳಿ ಪತನಗೊಂಡಿದೆ ಎಂದು ಗುವಾಹಟಿ ರಕ್ಷಣಾ PRO, ತಿಳಿಸಿದ್ದಾರೆ.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜುಮ್ಮರ್ ಬಸಾರ್ ಅವರು ದೂರವಾಣಿ ಮೂಲಕ ಮಾತನಾಡಿದ್ದು, “ಅಪಘಾತದ ಸ್ಥಳವು ರಸ್ತೆಯ ಮೂಲಕ ಸಂಪರ್ಕ ಹೊಂದಿಲ್ಲ. ದುರ್ಗಮ ಪ್ರದೇಶವಾಗಿದ್ದು ರಕ್ಷಣಾ ತಂಡ ಧಾವಿಸಿದೆ ಮತ್ತು ಮಾಹಿತಿಯನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪತನಗೊಂಡಿರುವ ಸೇನಾ ಹೆಲಿಕಾಪ್ಟರ್ ನಲ್ಲಿ ಎಷ್ಟು ಜನ ಇದ್ದರು ಎಂಬ ಇನ್ನು ಮಾಹಿತಿ ಲಭ್ಯವಾಗಿಲ್ಲ.
ಈ ವರ್ಷದ ಆರಂಭದಲ್ಲಿ ಅಕ್ಟೋಬರ್ 5 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಚೀತಾ ಹೆಲಿಕಾಪ್ಟರ್ ಪತನಗೊಂಡಿತ್ತು. ಅಆ ವೇಳೆ ಭಾರತೀಯ ಸೇನಾ ಪೈಲಟ್ ಪ್ರಾಣ ಕಳೆದುಕೊಂಡಿದ್ದರು.
“ತವಾಂಗ್ ಬಳಿಯ ಮುಂಚೂಣಿಯ ಪ್ರದೇಶಗಳಲ್ಲಿ ಹಾರಾಟ ನಡೆಸಿದ ಚೀತಾ ಹೆಲಿಕಾಪ್ಟರ್ ಅಂದು ಬೆಳಗ್ಗೆ 10ಗಂಟೆ ಸುಮಾರಿಗೆ ಅಪಘಾತಕ್ಕೀಡಾಯಿತು. ಆ ವೇಳೆ ಗಾಯಗೊಂಡಿದ್ದ ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.