CrimeNEWSನಮ್ಮರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಿತಿ ಮೀರಿದ ಫೇಕ್‌ನ್ಯೂಸ್ ಹಾವಳಿ : ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ, 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಸುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು ಎಂದಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು… ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ.

ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗೀ ತಿಳಿಸಿದ್ದಾರೆ.

ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು. ಸುಳ್ಳು ಸುದ್ದಿಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೇ ಮಾಡಿದರೂ ಅದನ್ನು ಸರ್ಕಾರ ಸಹಿಸುವುದಿಲ್ಲ. ಸಾಮರಸ್ಯ ಕಾಪಾಡುವ ಜತೆಗೆ ಪ್ರತಿಯೊಬ್ಬರಿಗೂ ಶಾಂತಿ, ನೆಮ್ಮದಿಯ ವಾತಾವರಣವನ್ನು ನೀಡಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?