CrimeNEWSನಮ್ಮಜಿಲ್ಲೆ

ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ಆರೋಪಿಗಳ ಪರ ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜ್‌ರಿಂದ  ವಾದ ಮಂಡನೆ  

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಲೇಜಿನ ಸಹಪಾಠಿಗಳನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ 90 ಸಾವಿರ ರೂ. ಸುಲಿಗೆ ಮಾಡಿದ್ದ 7 ಮಂದಿ ವಿದ್ಯಾರ್ಥಿಗಳನ್ನು ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದು, ಆರೋಪಿಗಳ ಜಾಮೀನು ಅರ್ಜಿ ಸಂಬಂಧ ನಾಳೆ (ಏ.28) ಸಿಟಿ ಸಿವಿಲ್‌ ಕೋರ್ಟ್‌ಹಾಲ್‌ 32ರಲ್ಲಿ ಪ್ರಕರಣ ಕೈಗೆತ್ತಿಕೊಳ್ಳಲಾಗುತ್ತಿದೆ.

ಯಲಹಂಕ ಉಪನಗರದ ಅನಂತಪುರ ನಿವಾಸಿಗಳಾದ ವಿವೇಕ್ (20). ಅನಾಮಿತ್ರ (20), ಯುವರಾಜ್ ರಾಥೋಡ್ (20), ಹರಿರ್ತೋಜಿತ್ ಮುಖರ್ಜಿ (20)ಪ್ರಜಿತ್ ಚತುರ್ವೇದಿ (20), ಅಲೆನ್ ಮತ್ತು ಕರಣ್ ಎಂಬುವರನ್ನು ಬಂಧಿಸಲಾಗಿದೆ.

ಆರೋಪಿಗಳು ಏ.18ರಂದು ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಸಿಂಗ್ ಎಂಬುವರನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಹಣ ಸುಲಿಗೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಹಲ್ಲೆಗೊಳಗಾದ ಕೃಷ್ಣ ಬಾಜಪೇಯಿ, ಯುವರಾಜ್ ಸಿಂಗ್ ರಾಜಾನುಕುಂಟೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು. ಅದೇ ಕಾಲೇಜಿನಲ್ಲಿ ಆರೋಪಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಈ ಎರಡು ಗುಂಪುಗಳ ನಡುವೆ ಯಾವುದೋ ವಿಚಾರಕ್ಕೆ ಗಲಾಟೆಯಾಗಿತ್ತು. ಈ ವೇಳೆ ಆರೋಪಿ ಅನಾಮಿತ್ರನ ತಲೆಗೆ ಪೆಟ್ಟು ಬಿದ್ದಿತ್ತು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿಗಳ ಗುಂಪು, ದೂರುದಾರ ಮತ್ತು ಆತನ ಸ್ನೇಹಿತರ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದರು ಎನ್ನಲಾಗಿದೆ.

ಬಾಡಿಗೆ ಮನೆ ನೋಡಲು ಹೋದಾಗ ಲಾಕ್: ಈ ಮಧ್ಯೆ ದೂರುದಾರದ ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಸಿಂಗ್ ನೋ ಬೋಕರ್ ಆ್ಯಪ್ ಮೂಲಕ ಅನಂತರಪುರದ ಕ್ಯಾಲಿರ್ಪೋಲಿಯ ರೆಸಾರ್ಟ್ ಬಳಿಯ ಕಟ್ಟಡದಲ್ಲಿರುವ 2ನೇ ಮಹಡಿಯ ಬಾಡಿಗೆ ಮನೆ ನೋಡಲು ಹೋಗಿದ್ದಾರೆ. ಅದೇ ಕಟ್ಟಡದಲ್ಲಿ ಆರೋಪಿಗಳು ವಾಸವಾಗಿದ್ದರು.

ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಸಿಂಗ್‌ರನ್ನು ಕಂಡ ಆರೋಪಿಗಳು, ಕೂಡಲೇ ಇಬ್ಬರನ್ನು ತಮ್ಮ ಕೋಣೆಗೆ ಕರೆದೊಯ್ದು ಮಧ್ಯಾಹ್ನ 2.30ರಿಂದ ರಾತ್ರಿ 8 ಗಂಟೆವರೆಗೂ ಕೂಡಿ ಹಾಕಿ ಕಬ್ಬಿಣದ ರಾಡ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ, ಸಿಗರೇಟ್‌ನಿಂದ ಸುಟ್ಟಿದ್ದಾರೆ.

ಅದಾದ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಹಣ ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದು, ಬಾಡಿಗೆ ಮನೆಗೆ ಮುಂಗಡವಾಗಿ ಕೊಡಲು ತಂದಿದ್ದ 40 ಸಾವಿರ ರೂ. ಅನ್ನು ಕೃಷ್ಣ ಬಾಜಪೇಯಿ ಜೇಬಿನಿಂದ ಕಸಿದುಕೊಂಡಿದ್ದಾರೆ. ಬಳಿಕ ಕೃಷ್ಣ ಬಾಜಪೇಯಿ ಸಹೋದರಿಯಿಂದ 50 ಸಾವಿರ ರೂ. ಅನ್ನು ಆನ್‌ಲೈನ್ ವರ್ಗಾವಣೆ ಮಾಡಿಸಿಕೊಂಡು, ಅದನ್ನು ಸುಲಿಗೆ ಮಾಡಿದ್ದರು.

ಮಾದಕವಸ್ತು ಕೊಟ್ಟು ವಿಡಿಯೋ ಚಿತ್ರೀಕರಣ: ಇಷ್ಟೆಲ್ಲ ಆದ ಬಳಿಕವೂ ದೂರುದಾರರ ಕೈಗೆ ಮಾದಕ ವಸ್ತುಗಳನ್ನು ಇಟ್ಟು ಅದನ್ನು ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ವೈರಲ್ ಮಾಡದಿರಲು ಮತ್ತೆ 4 ಲಕ್ಷ ರೂ. ಕೊಡಬೇಕು. ಈ ವಿಚಾರವನ್ನು ಹೊರಗಡೆ ಹೇಳಬಾರದು. ಒಂದು ವೇಳೆ ಬಹಿರಂಗ ಪಡಿಸಿದರೆ, ಕೊಲ್ಲುವುದಾಗಿ ಬೆದರಿಕೆ ಹಾಕಿ, ನಂತರ ಬಿಟ್ಟು ಕಳುಹಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಯಲ್ಲಿ ಹಳೇ ದ್ವೇಷಕ್ಕೆ ಕೃತ್ಯ ನಡೆದಿದೆ ಎಂಬುದು ಗೊತ್ತಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಜಾಮೀನು ಸಂಬಂಧ ಆರೋಪಿಗಳ ಪರ ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ನಾಳೆ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಲಿದ್ದಾರೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ