CrimeNEWSನಮ್ಮಜಿಲ್ಲೆ

ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಕರ್ತವ್ಯ ನಿರತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಕರ್ತವ್ಯ ನಿರತ ನಿರ್ವಾಹಕರ ಮೇಲೆ ಶುಕ್ರವಾರ ನವಲಗುಂದ ತಾಲೂಕಿನ ಯಮನೂರಿನಲ್ಲಿ ಹಲ್ಲೆ ಮಾಡಿದ ಶಿವಾನಂದ ಪಡೆಸೂರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯ ವಿವರ: ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಕಲಘಟಗಿ ಘಟಕಕ್ಕೆ ಸೇರಿದ ಕೆಎ 63 ಎಫ್ 0190 ಸಂಖ್ಯೆಯ ಬಸ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಬಸ್‌ನಲ್ಲಿ 84 ಮಂದಿ ಪ್ರಯಾಣಿಸುತ್ತಿದ್ದರು. ಯಮನೂರು ಬಸ್ ನಿಲ್ದಾಣದಲ್ಲಿ ಬಸ್‌ನಿಂತಾಗ 10 ಪ್ರಯಾಣಿಕರು ಇಳಿದಿದ್ದಾರೆ.

ಮತ್ತೆ 15ರಿಂದ 20 ಹತ್ತಲು ನಿಂತಿದ್ದರು. ಅವರಲ್ಲಿ ಕೆಲವರು ಹತ್ತಿದ್ದು, ಇನ್ನುಳಿದವರಿಗೆ ಬಸ್‌ನಲ್ಲಿ ಜಾಗ ಇಲ್ಲದಿದ್ದರಿಂದ ನಿರ್ವಾಹಕ ಸಂಗಪ್ಪ ಚಿರಚನಕಲ್ಲ ಬಸ್‌ನಲ್ಲಿ ಜಾಗ ಇಲ್ಲ, ಇನ್ನೊಂದು ಬಸ್‌ನಲ್ಲಿ ಬನ್ನಿ ಎಂದು ಹೇಳಿದ್ದಾರೆ. ಆಗ ಅಲ್ಲಿದ್ದ ಮೂರು ಜನರು ನಿರ್ವಾಹಕರಿಗೆ ಬಸ್‌ ಏನು ನಿಮ್ಮ ಅಪ್ಪಂದಾ? ಎಂದಿದ್ದಾರೆ. ಆಗ ನಿರ್ವಾಹಕರು ಸರಿಯಾಗಿ ಮಾತನಾಡಿ ಎಂದಿದ್ದಾರೆ.

ಈ ವೇಳೆ ಮೂವರು ಸೇರಿಕೊಂಡು ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ಬೈದು ಸಮವಸ್ತ್ರ ಹಿಡಿದು ಎಳೆದಾಡಿ, ಬಸ್‌ನಿಂದ ಕೆಳಗೆಳೆದುಕೊಂಡು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇನ್ನು ಹಲ್ಲೆ ತಡೆಯಲು ಹೋದ ಇತರ ಪ್ರಯಾಣಿಕರಿಗೂ ಬೆದರಿಕೆ ಹಾಕಿದ್ದಾರೆ.

ಇತ್ತ ಹಲ್ಲೆಯಿಂದ ಗಾಯಗೊಂಡಿರುವ ನಿರ್ವಾಹಕ ಸಂಗಪ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿ ಆರ್.ಎಂ. ರಾಜೇಂದ್ರ ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕ (ಪ್ರ) ಐ.ಜಿ. ಮಾಗಾಮಿ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.

ಬಳಿಕ ಈ ಘಟನೆಗೆ ಸಂಬಂಧಿಸಿದಂತೆ, ಹಲ್ಲೆ ಮಾಡಿದ ಶಿವಾನಂದ ಪಡೆಸೂರ ಹಾಗೂ ಇನ್ನಿಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ