NEWSರಾಜಕೀಯ

ವಿಧಾನಸಭಾ ಚುನಾವಣೆ- ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು ಇಂದು (ಶುಕ್ರವಾರ) ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣಾ ಕಾವು ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹೀಗಾಗಿ ವಿಪಕ್ಷ ಕಾಂಗ್ರೆಸ್ ಮತ್ತು ಆಡಳಿತ ಪಕ್ಷ ಬಿಜೆಪಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೇಲೆ ಕುತೂಹಲ ನೆಟ್ಟಿದೆ.

ಚುನಾವಣೆ ಹೊತ್ತಿನಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡುವುದು ಪಕ್ಷಗಳಿಗೆ ಕಠಿಣ ಕೆಲಸವಾಗಿರುತ್ತದೆ. ಯಾರಿಗೆ ಟಿಕೆಟ್‌ ಕೊಟ್ಟರೆ ಪಕ್ಷಕ್ಕೆ ಮತ್ತು ಕ್ಷೇತ್ರದ ಜನರಿಗೆ ಲಾಭ ನಷ್ಟ ಎಂಬ ಲೆಕ್ಕಚಾರದಲ್ಲಿ ಅಳೆದು ತೂಗಿ ಜತೆಗೆ ರಾಜ್ಯ ನಾಯಕರ ಶಿಫಾರಸಿನಂತೆ ಬಹುತೇಕ ಟಿಕೆಟ್‌ಅನ್ನು ಹಂಚಿಕೆ ಮಾಡಲಾಗುತ್ತದೆ.

ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರ ಜತೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಆಕಾಂಕ್ಷಿಗಳ ದಂಡು ದೆಹಲಿಯತ್ತ ತೆರಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒತ್ತಡ ಇಲ್ಲ. ಯಾರೆಲ್ಲಾ ಅಭ್ಯರ್ಥಿಗಳು ಶ್ರಮ ವಹಿಸಿದ್ದಾರೆ ಅನ್ನೋದು ಗೊತ್ತಿದೆ. ಕಳೆದ 3 ವರ್ಷದಿಂದ ಅಭ್ಯರ್ಥಿಗಳ ಶ್ರಮದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದೇವೆ. ಸಿಇಸಿ ಜತೆ ಐದಾರು ಬಾರಿ ಸಭೆ ನಡೆಸಿದ್ದೇವೆ. 10ರಿಂದ 12 ಬಾರಿ ಸರ್ವೆ ನಡೆಸಿದ್ದೇವೆ. ಈ ಎಲ್ಲರ ಬಗ್ಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯಲ್ಲಿ ಚರ್ಚೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಸಭೆಯಿದೆ ಎಂದು ತಿಳಿಸಿದರು.

ಗೆಲ್ಲುವ ಅವಕಾಶ ಇರುವ ಕಡೆ ಯುವಕರು ಮಹಿಳೆಯರಿಗೆ ಟಿಕೆಟ್ ನೀಡಲಾಗುತ್ತದೆ. ಬಹುತೇಕ ಶಾಸಕರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ