NEWSನಮ್ಮಜಿಲ್ಲೆರಾಜಕೀಯ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023: ಸುವಿಧದಲ್ಲಿ ಆನ್‌ಲೈನ್ ಮೂಲಕ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸುವಿಧದಲ್ಲಿ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಹಾಗೂ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಆರ್. ಲತಾ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಘೋಷಣೆ ಹಿನ್ನೆಲೆಯಲ್ಲಿ ಇದು ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಸೂಚನೆ ಅನ್ವಯ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ನಡೆಯಲಿದ್ದು, ಮೇ13 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ನೀತಿ ಸಂಹಿತೆ ಪ್ರಕಾರ ಅಧಿಸೂಚನೆ ಹೊರಡಿಸುವ ದಿನಾಂಕ ಏಪ್ರಿಲ್ 13, ನಾಮ ಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20. ನಾಮಪತ್ರಗಳ ಪರಿಶೀಲನೆ ಏಪ್ರಿಲ್ 21 ರಂದು ನಡೆಯಲಿದ್ದು ಮತ್ತು ನಾಮ ಪತ್ರ ಹಿಂಪಡೆದುಕೊಳ್ಳಲು ಏಪ್ರಿಲ್ 24 ಕೊನೆಯ ದಿನವಾಗಿ ದೆ. ಚುನಾವಣಾ ಪ್ರಕ್ರಿಯೆಯು ಮೇ 15 ರಂದು ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 8,67,909 ಮತದಾರರಿದ್ದು, ಪುರುಷ ಮತದಾರರರು 4,31,163 ಮಹಿಳಾ ಮತದಾರರು 4,36,625, ತೃತೀಯ ಲಿಂಗಿಗಳು 121, ವಿಲಕಚೇತನರು 12,481, 80 ವರ್ಷಗಳಿಗಿಂತ ಮೇಲ್ಪಟ್ಟವರು 20,324 ಇದ್ದಾರೆ. ಪ್ರತಿ ಸಾವಿರ ಪುರುಷರಿಗೆ 1012 ಮಹಿಳೆಯರಂತೆ ಅನುಪಾತವಿದೆ ಎಂದ ಅವರು, ಜಿಲ್ಲೆಯಲ್ಲಿ 26 ಚೆಕ್ ಪೋಸ್ಟ್‌ಗಳಿದ್ದು, 1 ಅಂತಾರಾಜ್ಯ, 17 ಅಂತರ ಜಿಲ್ಲೆ ಹಾಗೂ ಜಿಲ್ಲಾ ವ್ಯಾಪ್ತಿಯೊಳಗೆ 8 ಚೆಕ್ ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ವಿವರಿಸಿದರು.

45 ಫ್ಲೈಯಿಂಗ್ ಸ್ಕ್ವಾಡ್ ತಂಡಗಳು, ವಿಡಿಯೋ ಚಿತ್ರೀಕರಣ 10 ತಂಡಗಳು, ಇದರ ನಿಗಾ ವಹಿಸಲು 8 ವೆಚ್ಚ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸುವಿಧದಲ್ಲಿ ಆನ್‌ಲೈನ್ ಮುಖಾಂತರ ನಾಮಪತ್ರ ಸಲ್ಲಿಸಲು ಹಾಗೂ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಲು ಅವಕಾಶವಿರುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1137 ಮತಗಟ್ಟೆಗಳಿದ್ದು, ಅವುಗಳಲ್ಲಿ 879 ಗ್ರಾಮಾಂತರ ಹಾಗೂ ನಗರ ವ್ಯಾಪ್ತಿಯಲ್ಲಿ 258 ಮತಗಟ್ಟೆಗಳು ಕಾರ್ಯನಿರ್ವಹಿಸಲಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳಾಗಿ ಗಂಗಪ್ಪ, ದೇವನಹಳ್ಳಿ ಕ್ಷೇತ್ರಕ್ಕೆ ಪ್ರತಿಭಾ, ದೊಡ್ಡಬಳ್ಳಾಪುರ – ತೇಜಸ್ ಕುಮಾರ್, ನೆಲಮಂಗಲ – ಅಪೂರ್ವ ಬಿದರಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿಸಿದೆರು.

ಜಿಲ್ಲೆಯ 1137 ಮತ ಕ್ಷೇತ್ರಗಳಲ್ಲಿ ಶೇಕಡಾ 50 ರಷ್ಟು ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ಸೌಲಭ್ಯ ಸೇರಿದಂತೆ ಈ ಎಲ್ಲಾ ಮತ ಕ್ಷೇತ್ರಗಳಲ್ಲಿ ಸಕಲ ಮೂಲಭೂತ ಸೌಲಭ್ಯಗಳನ್ನು, ಕಾನೂನು ವ್ಯವಸ್ಥೆಗಳನ್ನು ಕಲ್ಪಿಸಿರುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ತಾಲೂಕಿಗೆ 5 ರಂತೆ ಮಹಿಳೆಯರನ್ನೇ ಒಳಗೊಂಡಿರುವ ಒಟ್ಟು 20 ವಿಶೇಷ ಮಹಿಳಾ ಮತಗಟ್ಟೆ ಕ್ಷೇತ್ರಗಳು ಕಾರ್ಯನಿರ್ವಹಿಸುವುದಾಗಿ, ವಿಕಲಚೇತನರಿಗೆ ಪ್ರೋತ್ಸಾಹ ನೀಡಲು ತಾಲ್ಲೂಕಿಗೆ 1 ರಂತೆ ಒಟ್ಟು 4 ವಿಕಲಚೇತನರ ಮತಗಟ್ಟೆ ಕ್ಷೇತ್ರಗಳು, ಜಿಲ್ಲೆಯ ಜನತೆಯನ್ನು ಮತದಾನ ಪ್ರಕ್ರಿಯೆಗೆ ಆಕರ್ಷಿಸುವ ನಿಟ್ಟಿನಲ್ಲಿ ಒಟ್ಟು 8 ಮಾದರಿ ಮತಗಟ್ಟೆ ಕೇತ್ರಗಳೂ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

80 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಈ ಬಾರಿ ಆಯೋಗ ಕಲ್ಪಿಸಿದೆ ಆದರೆ ಮತದಾನವನ್ನು ಹಾಗೂ ಚುನಾವಣೆ ಪ್ರಕ್ರಿಯೆಯನ್ನು ಒಂದು ಹಬ್ಬ ಎಂದು ಆಚರಿಸುವ ನಿಟ್ಟಿನಲ್ಲಿ ಹಿರಿಯ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಿದರೆ ಉತ್ತಮ ಎಂದು ಹೇಳಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ರವಿ ಎಂ. ತಿರ್ಲಾಪೂರ ಮಾತನಾಡಿ ಜಿಲ್ಲೆಯಲ್ಲಿ 32,000 ರಷ್ಟು ಬ್ಯಾನರ್ಸ್‌ ಬಂಟಿಂಗ್ಸ್, ಪೋಸ್ಟರ್‌ಗಳನ್ನು ತೆರವುಗೊಳಿಸುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸುವ್ಯಸ್ಥಿತ ಚುನಾವಣಾ ಪ್ರಕ್ರಿಯೆಗೆ ಸಕಲ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಿದ್ದು, ಗ್ರಾಮಾಂತರ ಜಿಲ್ಲೆಯ 26 ಚೆಕ್ ಪೋಸ್ಟ್‌ಗಳಲ್ಲಿ ಸೂಕ್ತ ಸಿಬ್ಬಂದಿ ವ್ಯವಸ್ಥೆಯಾಗಿರುವುದಾಗಿ ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ