NEWSಕೃಷಿನಮ್ಮರಾಜ್ಯ

ಅಥಣಿ ರೈತ ಬೆಳೆದ ಅರಿಶಿಣ ದೇಶದಲ್ಲೇ ದಾಖಲೆ ಮಟ್ಟಕ್ಕೆ ಮಾರಾಟ- ಸೈಬಣ್ಣ ದಿಲ್‌ಖುಷ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ರೈತರೊಬ್ಬರು ಬೆಳೆದ ಅರಿಶಿಣ ದಾಖಲೆ ಮಟ್ಟಕ್ಕೆ ಮಾರಾಟವಾಗಿ ಇದು ಇಡೀ ಭಾರತದಲ್ಲೇ ಮೊದಲು ಎಂಬಂತಾಗಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಕೋಹಳ್ಳಿ ಗ್ರಾಮದ ರೈತ ಸೈಬಣ್ಣ ಭೂಪತಿ ಪೂಜಾರಿ ಎಂಬುವರೆ ಅರಿಶಿನ ಬೇಳೆದ ಈಗ ಫುಲ್ ಖುಷಿಯಲ್ಲಿದ್ದಾರೆ. ಹೌದು! ಇದು ಭಾರತದಲ್ಲಿ ಅಚ್ಚರಿಯ ದರಕ್ಕೆ ಮಾರಾಟವಾಗಿದ್ದು, ಪ್ರತಿ ಕ್ವಿಂಟಲ್​ಗೆ ಬರೋಬ್ಬರಿ 41,101 ರೂ. ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ಮೂರು ಎಕರೆ ಜಮೀನಿನಲ್ಲಿ ಅರಿಶಿಣ ಬೆಳೆದ ರೈತ ಪ್ರತಿ ಎಕರೆಗೆ 25-28 ಕ್ವಿಂಟಲ್ ಅರಿಶಿನ ಇಳುವರಿ ಪಡೆದಿದ್ದು, ಸದ್ಯ ಇದು ಶ್ರಮಕ್ಕೆ ತಕ್ಕ ವರದಾನವಾಗಿದೆ ಎಂದು ಸೈಬಣ್ಣ ಸಂತಸ ಹಂಚಿಕೊಂಡಿದ್ದಾರೆ.

ಸೈಬಣ್ಣ ಶೈಲಂ ತಳಿಯ ಅರಿಶಿನ ಬಿಜ ನಾಟಿ ಮಾಡಿ ಸಮರ್ಪಕ ನೀರು ಔಷಧೋಪಚಾರದೊಂದಿಗೆ ಉತ್ತಮ ಇಳುವರಿ ಪಡೆದಿದ್ದಾರೆ. ಈಗಾಗಲೇ 18 ಕ್ವಿಂಟಲ್ ಅರಿಶಿನ ಮಾರಾಟವಾಗಿದ್ದು ಅದರಿಂದ 7ಲಕ್ಷ ರೂ. ನಿವ್ವಳ ಲಾಭ ಪಡೆದಿದ್ದಾರೆ.

ಪ್ರತಿ ಎಕ್ಕರೆಗೆ 30 ಸಾವಿರ ಖರ್ಚು ಮಾಡಿದ ಅವರು ಮೂರು ಎಕ್ಕರೆ ಅರಿಶಿನದಿಂದ ಅಂದಾಜು 30 ಲಕ್ಷ ರೂಪಾಯಿ ಆದಾಯದ ನಿರೀಕ್ಷೆಯಲ್ಲಿ ಇದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...