CrimeNEWSನಮ್ಮಜಿಲ್ಲೆ

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾದ ದರೋಡೆಕೋರನಿಗೆ ಲೇಡಿಕಾಪ್‌ ಗುಂಡೇಟು ರುಚಿ ತೋರಿಸಿ ಸೆರೆ ಹಿಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂಬ ಆಭರಣ ಕಳ್ಳನೇ ಮಹಿಳಾ ಪೊಲೀಸ್‌ ಅಧಿಕಾರಿಯಿಂದ ಗುಂಡೇಟು ತಿಂದ ಆರೋಪಿ.

ಈತ ಕೇಶ್ವಾಪುರ ವ್ಯಾಪ್ತಿಯ ಚಿನ್ನದ ಅಂಗಡಿವೊಂದರಲ್ಲಿ ಕಳ್ಳತನ ಮಾಡಿದ್ದ. ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಫರ್ಹಾನ್‌ಗೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಬಂಧಿಸಲು ಗಾಮನ ಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೇಬಲ್ ಸುಜಾತಾ ಹಾಗೂ ಮಹೇಶ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಕವಿತಾ ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಆತ ಎಚ್ಚರಿಕೆಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್