CrimeNEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

KSRTC ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಯತ್ನ- 10ಕ್ಕೂ ಹೆಚ್ಚು ಮಂದಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.

ಸೋಮವಾರದಿಂದ ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಾಡುತ್ತಿರುವ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳನ್ನು ಇಂದು ಬೆಳಗ್ಗೆ ಏಕಾಏಕಿ ಪೊಲೀಸರು ಬಂದು ಬಂಧಿಸಿ ಹೈಗ್ರೌಂಡ್‌ ಪೊಲೀಸ್‌ ಠಾಣೆ ಆವರಣಕ್ಕೆ ಕರೆದುಕೊಂಡು ಹೋಗಿದ್ದಾರೆ.

ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಶಾಂತಿಯುವಾಗಿ ಧರಣಿ ಮಾಡುತ್ತಿದ್ದರೂ ಅವರನ್ನು ಬಿಡದೆ ಸರ್ಕಾರ ನೌಕರರ ಹೋರಾಟವನ್ನು ಹತ್ತಿಕ್ಕಲು ಪೊಲೀಸ್‌ ಬಲ ಪ್ರಯೋಗ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಪದಾಧಿಕಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಇದು ನಮ್ಮ ಬೇಡಿಕೆಗಳು ಈಡೇರಿಸುವವರೆಗೂ ಮುಂದುವರಿಯಲಿದೆ. ಕಳೆದ ಬಾರಿ ಬಿಜೆಪಿ ಸರ್ಕಾರ ಕೊಟ್ಟ ಮಾತು ತಪ್ಪಿತು ಅದೇ ರೀತಿ ಇಂದಿನ ಕಾಂಗ್ರೆಸ್‌ ಸರ್ಕಾರ ಕೂಡ ನಡೆದುಕೊಳ್ಳುತ್ತಿರುವುದು ಭಾರಿ ಅನ್ಯಾಯ ಎಂದು ಕೆಬಿಎನ್‌ಎನ್‌ ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಸರ್ಕಾರದ ಈ ನಡೆಯನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದು, ನಮ್ಮ ಈ ಹೋರಾಟಕ್ಕೆ ನೌಕರರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಬರುತ್ತಿದ್ದರು ಇದನ್ನು ಮನಗಂಡ ಸರ್ಕಾರ ಪೊಲೀಸ್‌ ಬಲವನ್ನು ನಮ್ಮ ಮೇಲೆ ಪ್ರಯೋಗ ಮಾಡಿ ನಮ್ಮನ್ನು ಫ್ರೀಡಂಪಾರ್ಕ್‌ನಿಂದ ಎಬ್ಬಿಸುತ್ತಿದೆ. ಆದರೆ ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಚಂದ್ರು ಕೂಡ ಈ ಬಗ್ಗೆ ಮಾತನಾಡಿದ್ದು, ನಾವು ಶಾಂತಿಯುತವಾಗಿ ಧರಣಿ ಮಾಡುತ್ತಿದ್ದೇವೆ. ಆದರೆ, ಪೊಲೀಸರು ಬಂದು ನಮ್ಮನ್ನು ಏಕಾಏಕಿ ಬಂಧಿಸಿರುವುದು ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಬೆಲೆ ಇಲ್ಲ ಎಂಬುದನ್ನು ತೋರಿಸುವಂತಿದೆ. ಇದು ಸಮಾಜಕ್ಕೆ ಮಾರಕವಾದ ನಡೆ ಎಂದು ಖಂಡಿಸಿದರು.

ಇನ್ನು ಸರ್ಕಾರ ಈ ರೀತಿ ನಮ್ಮ ಮೇಲೆ ದೌರ್ಜನ್ಯ ಎಸಗುತ್ತಿದ್ದರೆ ನಾವು ಅಹೋರಾತ್ರಿ ಧರಣಿ ಜತೆಗೆ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸದ್ಯ ಧರಣಿ ನಿರತ ಸಮಾನ ಮನಸ್ಕರ ವೇದಿಕೆಯ ಮುಖಂಡರನ್ನು ಹೈಗ್ರೌಂಡ್‌ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದು ಧರಣಿ ಸ್ಥಳದಲ್ಲಿ ಕೆಲವೇ ಕೆಲವು ಮಂದಿ ಹೋರಾಟಗಾರರು ಚದುರಿದಂತೆ ಕುಳಿತಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು