CRIMENEWSನಮ್ಮಜಿಲ್ಲೆ

ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತಯ ಅತ್ಯಾಚಾರಕ್ಕೆ ಯತ್ನ: ಬಂಧನ, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ ಪೊಲೀಸರು

ಯಾರಿಗಾದ್ರೂ ಈ ವಿಷಯವನ್ನು ಹೇಳಿದರೆ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ. ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ  ಬಂಧಿಸಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥನೊಬ್ಬ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪದವಿ ವ್ಯಾಸಂಗ ಮಾಡುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್‌ ಕೊಡುವುದಾಗಿ ಹೇಳಿ ಬೈಕ್‌ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಆ ಬಳಿಕ ಆಕೆ ಅವಕಾಶ ಮಾಡಿಕೊಡದಿದ್ದಾಗ ಮತ್ತೆ ವಾಪಸ್‌ ಕರೆದುಕೊಂಡು ಬರುತ್ತಿದ್ದ, ಈ ವೇಳೆ ಯಾರಿಗಾದ್ರೂ ಈ ವಿಷಯವನ್ನು ಹೇಳಿದರೆ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ.

ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಆರೋಪಿತ ವಿದ್ಯಾಭ್ಯಾಸದ ಜತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈತನಿಗೆ ಸಾಥ್ ನೀಡಿರುವ ಇನ್ನಿಬ್ಬರು ಸ್ನೇಹಿತರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಸಂಬಂಧ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ಮುಂದುವರಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ