Friday, November 1, 2024
CrimeNEWSನಮ್ಮರಾಜ್ಯ

ಓವರ್‌ಟೆಕ್ ಮಾಡಿದ KSRTC ಬಸ್ ಚಾಲಕನ ಮೇಲೆ ಆಟೋ ಗ್ಯಾಂಗ್‌ ಹಲ್ಲೆ : ಮೂವರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೊಡ್ಡಬಳ್ಳಾಪುರ ಘಟಕದ ಚಾಲಕ ಪ್ರಸನ್ನ ಎಂಬುವರೆ ಹಲ್ಲೆಗೊಳಗಾದ ಚಾಲಕ. ಮುಂದೆ ಹೋಗುತ್ತಿದ್ದ ಆಟೋ ದಾರಿ ಬಿಡದೆ ಅಡ್ಡದಿಡ್ಡಿ ಚಾಲನೆ ಮಾಡಿದ್ದಾರೆ. ಈ ನಡುವೆ ಕೆಎಸ್​ಆರ್​ಟಿಸಿ ಚಾಲಕ ಓವರ್‌ಟೆಕ್‌ ಮಾಡಿದ್ದರಿಂದ ಆಟೋದಲ್ಲಿದ್ದ ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಸೇರಿ ನಾಲ್ವರು ಬಸ್‌ ತಡೆದು ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ಮಂಗಳವಾರ ಮಧ್ಯಾಹ್ನ ಕೆಎಸ್​ಆರ್​ಟಿಸಿ ಬಸ್​ ಮಾಡೇಶ್ವರದಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿತ್ತು. ಈ ವೇಳೆ ತಮಗೆ ದಾರಿ ಬಿಡದೆ ಆಟೋ ಓಡಿಸಿಕೊಂಡು ಹೋಗುತ್ತಿದ್ದರು. ಬಳಿಕ ಬಸ್ ಓವರ್‌ಟೆಕ್‌ ಮಾಡಿದ್ದರಿಂದ ಕುಪಿತಗೊಂಡು ಬಸ್‌ ಅಡ್ಡಗಟ್ಟಿ ಆಟೋದಲ್ಲಿದ್ದ ನಾಲ್ವರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಹಲ್ಲೆಯಿಂದ ಚಾಲಕನನ್ನ ರಕ್ಷಿಸಲು ಹೋದ ನಿರ್ವಾಹಕ ಮತ್ತು ಪ್ರಯಾಣಿಕರ ಮೇಲೂ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬಸ್​ ಚಾಲಕ ಪ್ರಸನ್ನ ಅವರನ್ನು ಸ್ಥಳೀಯ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ದೊಡ್ಡಬೆಳವಂಗಲ ಪೊಲೀಸರು ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಈ ರೀತಿಯ ಹಲ್ಲೆಗೊಳಗಾದ ಸಾರಿಗೆ ನೌಕರರ ಹಿತರಕ್ಷಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸುಪ್ರೀಂ ಮತ್ತು ಹೈಹೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ಸಂಘಕಟ್ಟಿ ಆ ಮೂಲಕ ಚಾಲನಾ ಸಿಬ್ಬಂದಿಯ ರಕ್ಷಣೆಗೆ ನಿಂತಿದ್ದಾರೆ. ಆದರೆ, ವಕೀಲರು ತಮ್ಮ ಶ್ರಮಕ್ಕೆ ತಕ್ಕನಾಗಿ ನೌಕರರು ನಡೆದುಕೊಳ್ಳುತ್ತಿಲ್ಲ ಎಂದು ಬೇಸರಗೊಂಡಿದ್ದು, ಸಾಮಾಜಿಕ ಜಾಲತಾಣದಿಂದ ದೂರ ಸರಿದಿದ್ದಾರೆ.

ಇದರ ಜತೆಗೆ ಇನ್ನು ಮುಂದೆ ನಾವು ಸಮಾಜಿಕ ಜಾಲತಾಣದ ಮೂಲಕ ನೌಕರರಿಗೆ ಕಾನೂನಾತ್ಮಕವಾಗಿ ನೀಡುತ್ತಿದ್ದ ಸಲಹೆಗಳನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಯಾವುದೇ ಪ್ರಕರಣವಿದ್ದರೂ ಆ ಬಗ್ಗೆ ಕಚೇರಿಯಲ್ಲೇ ಭೇಟಿ ಮಾಡಬೇಕು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...