NEWSನಮ್ಮರಾಜ್ಯರಾಜಕೀಯ

ತಿ.ನರಸೀಪುರಲ್ಲಿ ಚಿರತೆ ಹಾವಳಿ ತಪ್ಪಿಸಿ: ಸದನದಲ್ಲಿ ಮನವಿ ಮಾಡಿದ ಶಾಸಕ ಅಶ್ವಿನ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ತಿ.ನರಸೀಪುರ ತಾಲೂಕಿನಲ್ಲಿ ಹೆಚ್ಚಾಗಿರುವ ಚಿರತೆ ಹಾವಳಿ ತಪ್ಪಿಸುವಂತೆ ಕ್ಷೇತ್ರದ ಶಾಸಕ ಎಂ.ಅಶ್ವಿನ್‌ ಕುಮಾರ್‌ ಅಧಿವೇಶನದಲ್ಲಿ ಮನವಿ ಮಾಡಿದರು.

ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿ ಅವರು, ನಮ್ಮ ಕ್ಷೇತ್ರದಲ್ಲಿ ಚಿರತೆ ದಾಳಿಗೆ  ಒಬ್ಬ ಯುವಕ ಓರ್ವ ಯುವತಿ ಜೀವ ಕಳೆದುಕೊಂಡಿದ್ದಾರೆ. ಇದಿಷ್ಟೇ ಅಲ್ಲದೆ ಹತ್ತಾರು ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿವೆ ಹೀಗಾಗಿ ನಮ್ಮ ಕ್ಷೇತ್ರದಲ್ಲಿ ಇರುವ ಚಿರತೆಗಳನ್ನು ಸೆರೆಹಿಡಿಯಬೇಕು ಎಂದರು.

ಈ ವೇಳೆ ಹಲವಾರು ಶಾಸಕರು ಧ್ವನಿಗೂಡಿಸಿದರು. ಆರಣ್ಯ ಇಲಾಖೆ ಅಧಿಕಾರಿಗಳು ಒಂದು ಕಡೆ ಚಿರತೆ ಹಿಡಿದು ಮತ್ತೊಂದು ಕಡೆ ಬಿಡುತ್ತಿರುವುದರಿಂದ ನಮಗೆ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಮಾಗಡಿ ಶಾಸಕ ಮಂಜುನಾಥ್‌ ತಿಳಿಸಿದರು.

ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಶಾಸಕ ಅಶ್ವಿನ್‌ ಕುಮಾರ್‌ ಎತ್ತಿದ ಪ್ರಶ್ನೆಗೆ ಸದನದಲ್ಲಿ 10 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಯಿತು.

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಸಿಎಂ ಗಮನಕ್ಕೆ ತರುವುದಾಗಿ ಹೇಳಿ ಮುಂದಿನ ಕ್ರಮ ಜರುಗಿಸಲು ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು.

ಇನ್ನು ಕಬ್ಬು ಕಟಾವು ಮಾಡಬೇಕು ಇದರಿಂದ ಚಿರತೆ ಹಾವಳಿ ಸ್ವಲ್ಪಮಟ್ಟಿಗಾದರೂ ಕಡಿಮೆಯಾಗುತ್ತದೆ ಎಂದು ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಭಾಧ್ಯಕ್ಷರ ಗಮನ ಸೆಳೆದರು.

ಚಿರತೆ ಹಾವಳಿ ಹೆಚ್ಚಾಗಲು ಅವುಗಳಿಗೆ ಕಾಡಿನಲ್ಲಿ ಆಹಾರ ಸಿಗುತ್ತಿಲ್ಲ. ಚಿರತೆ ಆಹಾರದ ಪ್ರಾಣಿಗಳು ಕಡಿಮೆ ಆಗಿದ್ದು, ಹೀಗಾಗಿ ಆಹಾರ ಪ್ರಾಣಿಗಳಿರುವ ಕಡೆಗೆ ಅರಣ್ಯ ಇಲಾಖೆ ಅವರು ಹಿಡಿದ ಚಿರತೆಗಳನ್ನು ಬಿಡುವಂತೆ ಸೂಚನೆ ನೀಡಬೇಕು ಎಂದರು.

ಅರಣ್ಯ ಖಾತೆ ಹೊಂದಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಚಿರತೆ ಧಾಮವನ್ನು ತೆರೆಯಬೇಕು. ಕಾಡಿನಲ್ಲಿ ಮಾಂಸಾಹಾರ ಪ್ರಾಣಿಗಳಿಗೆ ಬೇಕಾದ ಸಣ್ಣ ಸಣ್ಣ ಪ್ರಾಣಿಗಳ ಸಂತತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ