ಬೆಂಗಳೂರು ಗ್ರಾಮಾಂತರ: ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದು ಜಿಲ್ಲಾಧಿಕಾರಿ ಬಸವರಾಜು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಇಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಕುರಿತು ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾನತೆಯ ಅರಿವು ತಿಳಿದುಕೊಳ್ಳುವುದರಲ್ಲಿ ನಾವೆಲ್ಲ ಹಿಂದೆಯೇ ಉಳಿದಿದ್ದೇವೆ. ಅಂಬೇಡ್ಕರ್ ಅವರು ಹಲವಾರು ದೇಶಗಳನ್ನು ಸುತ್ತಿ ಅಲ್ಲಿನ ಭಾಷೆ, ಕಾನೂನು ವ್ಯವಸ್ಥೆ ಎಲ್ಲಾವನ್ನು ತಿಳಿದುಕೊಂಡು ನಮ್ಮ ದೇಶದ ಸಂಸ್ಕೃತಿ, ವ್ಯವಸ್ಥೆ ಎಲ್ಲಾವನ್ನು ಪರಿಗಣಿಸಿ ಸಧೃಡ ಸಂವಿಧಾನವನ್ನು ನೀಡಿದ್ದಾರೆ, ಹಿಂದಿನ ಕಾಲದಿಂದಲೂ ಈ ಅಸಮಾನತೆ ಎನ್ನುವುದು ಬೆಳೆಯುತ್ತಲೇ ಬಂದಿದೆ ಹಾಗಾಗಿ ನಾವೆಲ್ಲರು ಸಾಮಾಜಿಕ ನ್ಯಾಯದ ಬಗ್ಗೆ ತಿಳಿದುಕೊಳ್ಳಬೇಕು ಆಗ ಮಾತ್ರ ಸರ್ವರಿಗೂ ಎಲ್ಲಾದರಲು ಸಮಾನತೆ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಸಮಾನತೆಯ ಕನಸು ನನಸಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ಮಾತನಾಡಿ ಎಲ್ಲಾ ರೀತಿಯ ಕಾನೂನು ಕ್ರಮ ಇದ್ದರೂ ಈಗಲೂ ಜಾತಿ ಅಸಮಾನತೆ, ಜಾತಿನಿಂದನೆ ಹಾಗೂ ಸಾಮಾಜಿಕ ಅಸಮಾನತೆ ಸಮಾಜದಲ್ಲಿ ನಡೆಯುತ್ತಿರುವುದು ಇದೊಂದು ಕೆಟ್ಟ ಸಂಗತಿ. ಯಾವುದೇ ವ್ಯಕ್ತಿಗೆ ಹುಟ್ಟಿನಿಂದ ಸಾವಿನಿವರೆಗೂ ಜಾತಿ,ವರ್ಣ,ಲಿಂಗ,ಧರ್ಮದ ಆಧಾರದ ಮೇಲೆ ಬೇಧ ಭಾವ ಮಾಡಬಾರದು.
ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡುವಂತೆ ತಿಳಿಸಿದರು.
ಡಿವೈಎಸ್ಪಿ ರವಿ ಅವರು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾತನಾಡಿ ವಿಧಿ 14-18 ರವರೆಗು ಜಾತಿನಿಂದನೆ ಮತ್ತು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಸಂವಿಧಾನದಲ್ಲಿ ತಿಳಿಸಲಾಗಿದೆ.ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ತಾರತಮ್ಯವನ್ನು ತಡೆಯುವ ಕಾನೂನು ಇದಾಗಿದೆ.1989 ರ ದೌರ್ಜನ್ಯ ತಡೆ ಕಾಯ್ದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸದಸ್ಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು, ಅಂತಹ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಇನ್ನು ಈ ಕಾಯ್ದೆಯಲ್ಲಿ ಯಾವುದೇ ಅನುಸೂಚಿತ ಜಾತಿ ಮತ್ತು ಪಂಗಡದವರಿಗೆ ಬಾಯಿಗೆ ವಸ್ತುವನ್ನು ತುರುಕಿದರೆ, ಮನೆಮುಂದೆ ಸತ್ತ ಪ್ರಾಣಿ ಹಾಕಿದರೆ, ಎಲ್ಲರ ಮುಂದೆ ತಲೆ ಮತ್ತು ಮೀಸೆ ಬೋಳಿಸಿದರೆ ಅಥವಾ ತೆಗೆದರೆ, ಜೀತಕ್ಕೆ ಬಳಸಿಕೊಂಡರೆ, ದೇವದಾಸಿ ಪದ್ಧತಿ, ಅಡ್ಡಿ ಪಡಿಸುವುದು, ಭಯ ಹುಟ್ಟಿಸುವುದು, ಮತ ಹಾಕುವುದನ್ನು ತಡೆಯುವುದು ಅಥವಾ ನೀನು ನಮ್ಮ ಪಕ್ಷಕ್ಕೆ ಮತ ಹಾಕಬೇಕು ಎನ್ನುವುದು, ಈ ರೀತಿ ಅವರ ಭಾವನೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಅಡಚಣೆಯನ್ನು ಮಾಡಬಾರದು, ಮಾಡಿದರೆ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾಡಿದ್ದಲ್ಲಿ 6 ತಿಂಗಳು ಅಥವಾ ಜೀವಿತವಧಿವರೆಗೂ ಶಿಕ್ಷೆಯಾಗುವ ಅವಕಾಶವಿದೆ ಎಂದರು.
ಅರಿವು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಪರಿಕಲ್ಪನೆ ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ವಿಷಯವನ್ನು ಕುರಿತು ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆಯ ತರಬೇತಿ ಸಂಯೋಜಕರಾದ ಡಾ. ಸಚಿನ್ ಬಿ.ಎಸ್ ಹಾಗೂ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...