NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತಾದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮದ ಕಾರ್ಯಕ್ರಮಗಳು ಇಂದು ಅದ್ದೂರಿಯಾಗಿ ಜರುಗುತ್ತಿವೆ.

ಅರಮನೆಯಲ್ಲಿ ಮುಂಜಾನೆ 5.30 ರಿಂದಲೇ ಆಯುಧಪೂಜೆ ಕೈಂಕರ್ಯಗಳು ಶುರುವಾಗಿದ್ದು, ಮಧ್ಯಾಹ್ನ 1.30 ರವರೆಗೆ ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಮೈಸೂರಿನ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ವಿಧಾನಗಳನ್ನು ನೆರವೇರಿಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ, ಪೂಜಾ ವಿಧಿ ವಿಧಾನ ನಡೆಯಿತು. 7.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು ಹಾಗೂ ಪಟ್ಟದ ಕುದುರೆ ಆಗಮನವಾಯಿತು. 8.10ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆಯಾದವು. 9 ಗಂಟೆಗೆ ಚಂಡಿ ಹೋಮ ಪೂರ್ಣಾಹುತಿ ನಡೆಯಿತು.

ಬೆಳಗ್ಗೆ 9.25ಕ್ಕೆ ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣಮಂಟಪಕ್ಕೆ ಆಯುಧಗಳನ್ನು ವಾಪಸ್ ತರಲಾಯಿತು. ಬಳಿಕ 11.02 ರಿಂದ 11.25ರ ಶುಭ ಮುಹೂರ್ತದಲ್ಲಿ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ.

ಸಿಂಹಾಸನ, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೆ ಯದುವೀರ್ ಪೂಜೆ ಸಲ್ಲಿಸಲಿದ್ದಾರೆ. ಅಲ್ಲದೆ, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜಾ ಕಾರ್ಯಗಳು ಯಾವುದೇ ವಿಘ್ನವಿಲ್ಲದೆ ನಡೆಯುತ್ತಿವೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ