NEWSನಮ್ಮಜಿಲ್ಲೆಸಂಸ್ಕೃತಿ

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಡಿಸಿ ಬಸವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜಯಂತಿಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಡು ಮುಟ್ಟದ ಸೊಪ್ಪಿಲ್ಲ ಬಾಬೂಜೀ ನಿರ್ವಹಿಸದ ಖಾತೆಗಳಿಲ್ಲ’ ಎಂಬ ಮಾತೇ ಇದೆ. ಭಾರತದ ಉಪ ಪ್ರಧಾನಿಗಳಾಗಿ, ವಾರ್ತಾ ಮತ್ತು ಪ್ರಚಾರ, ಸಾರಿಗೆ, ರೈಲ್ವೆ, ಕಾರ್ಮಿಕ ಮತ್ತು ಪುನರ್ವಸತಿ, ಆಹಾರ, ಕೃಷಿ, ಸಹಕಾರ, ನೀರಾವರಿ ಇತ್ಯಾದಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬಾಬು ಜಗಜೀವನರಾಮ್ ಅವರು ವಿಶೇಷವಾಗಿ 1970-74ರಲ್ಲಿ ರಕ್ಷಣಾ ಸಚಿವರಾಗಿ ಅಮೋಘ ಸಾಧನೆ ಮಾಡಿದರು. ಅವರ ಕಾಯಕ ನಿಷ್ಠೆ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ. ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ದಕ್ಷ ಆಡಳಿತದಿಂದ ನಮ್ಮ ಮುಂದೆ ಅವರು ಆದರ್ಶಪ್ರಾಯರಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ವಿನೂತನ, ಅಮೋಘ ಸೇವೆಗೆ ದೇಶ ಅವರನ್ನು ‘ಹಸಿರು ಕ್ರಾಂತಿಯ ಹರಿಕಾರ’ ಎಂದೇ ಕರೆಯಿತು. ಇಂದು ಭವಿಷ್ಯದ ಭಾರತಕ್ಕೆ ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್.ಪ್ರೇಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...