NEWSಸಂಸ್ಕೃತಿ

ಪ್ರತ್ಯೇಕ ಲಿಂಗಾಯತ ಧರ್ಮ ಮತ್ತೆ ಮುನ್ನೆಲೆಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಕೈಹಾಕಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೈಸುಟ್ಟುಕೊಂಡಿತ್ತು. ಆದ್ರೂ ಆ ಪಕ್ಷದ ನಾಯಕರು ಎಚ್ಚೆತ್ತುಕೊಂಡಿಲ್ಲ.

ಪಂಚಮಸಾಲಿಗಳು 2ಎ ಮೀಸಲಾತಿಗಳು ಮತ್ತೆ ಹೋರಾಟ ಶುರು ಮಾಡಿರುವ ಸಂದರ್ಭದಲ್ಲಿ, ಅದೇ ಸಮುದಾಯದ ಮಾಜಿ ಮಂತ್ರಿ ಎಂ.ಬಿ.ಪಾಟೀಲ್, ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಪರ ವಿರೋಧ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚೆಗಷ್ಟೇ ಜೈಲಿಂದ ಜಾಮೀನಿನ ಮೇಲೆ ಹೊರಬಂದಿರೋ ವಿನಯ್ ಕುಲಕರ್ಣಿ, ಎಲ್ಲರೂ ಕೂಡಿ ಪ್ರತ್ಯೇಕ ಧರ್ಮ ಮಾಡಿದ್ರೆ ಒಳ್ಳೆಯದೇ ಎಂದಿದ್ದಾರೆ. ಪ್ರತ್ಯೇಕ ಧರ್ಮದ ಕಾರಣವೊಂದೇ ಕಾಂಗ್ರೆಸ್ ಸೋಲಿಗೆ ಕಾರಣ ಆಗಿರಲಿಲ್ಲ ಅಂತಲೂ ವ್ಯಾಖ್ಯಾನಿಸಿದ್ದಾರೆ.

ಇತ್ತ ಕಾಂಗ್ರೆಸ್ಸಿಗರ ಧರ್ಮ ದಾಳಕ್ಕೆ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ಎಂ.ಬಿ.ಪಾಟೀಲ್ ಈಗಾಗಲೇ ಇಂಥ ಪ್ರಯತ್ನ ಮಾಡಿ ‘ಕೈ’ ಸುಟ್ಟುಕೊಂಡಿದ್ದಾರೆ.

ಮತ್ತೆನಾದ್ರೂ ಪ್ರಯತ್ನ ಮಾಡಿದ್ರೆ ಸರ್ವನಾಶ ಆಗ್ತಾರೆ ಅಂತಾ ಎಚ್ಚರಿಸಿದ್ದಾರೆ. ಸಚಿವ ನಿರಾಣಿ ಮಾತ್ರ, ಸಮಸ್ತ ಲಿಂಗಾಯತ ಧರ್ಮದ ಬೇಡಿಕೆ ಇದ್ರೆ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರದಲ್ಲಿ ಸಿದ್ದರಾಮಯ್ಯ ಎಚ್ಚರಿಕೆಯ ನಡೆ ಇಟ್ಟಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ನನ್ನನ್ನೇನು ಕೇಳಬೇಡಿ  ಎಂಬಿ ಪಾಟೀಲರನ್ನೇ ಕೇಳಿ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ.

 

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ