NEWSನಮ್ಮಜಿಲ್ಲೆನಮ್ಮರಾಜ್ಯ

ಹವಾಮಾನ ವೈಪರೀತ್ಯ: ಬಾರದ ವಿಮಾನ ಏರ್​ಲಿಫ್ಟ್ ಕಾರ್ಯ ವಿಳಂಬ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ತಡರಾತ್ರಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಮತ್ತೊಂದು ಕಡೆ ಈಗಾಗಲೇ ಉಮೇಶ್ ಕತ್ತಿ ಪಾರ್ಥಿವ ಶರೀರ ಎಚ್​ಎಎಲ್​ ಏರ್​ಪೋರ್ಟ್ ತಲುಪಿದ್ದು ಏರ್​ಲಿಫ್ಟ್ ಕಾರ್ಯ ವಿಳಂಬವಾಗಲಿದೆ.

ಹವಾಮಾನ ವೈಪರೀತ್ಯದಿಂದ ಏರ್​ಲಿಫ್ಟ್​ ವಿಳಂಬವಾಗಿದೆ. ಚೆನ್ನೈನಿಂದ ಬೆಂಗಳೂರಿಗೆ ಬರಬೇಕಿದ್ದ ವಿಶೇಷ ವಿಮಾನ ಹವಾಮಾನ ವೈಪರೀತ್ಯದಿಂದ ಕ್ಯಾನ್ಸಲ್ ಆಗಿದ್ದು, ಹೈದರಾಬಾದ್​​ನಿಂದ ವಿಶೇಷ ವಿಮಾನ ಬರುವಂತೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಕರೆ ಮಾಡಿದ್ದಾರೆ. ಈ ವಿಶೇಷ ವಿಮಾನ 10.30ಕ್ಕೆ ಎಚ್​ಎಎಲ್ ತಲುಪಲಿದೆ. ಹೀಗಾಗಿ ಏರ್​ಲಿಫ್ಟ್​ ವಿಳಂಬವಾಗಿದೆ.

ಇತ್ತ ರಾಜಕೀಯ ಗಣ್ಯರು ಎಚ್​ಎಎಲ್​ ಏರ್​ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆ.ಜೆ. ಜಾರ್ಜ್, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಅಂತಮ ದರ್ಧನಕ್ಕೆ ಬಂದ ವೇಳೆ ಎಚ್‌ಎಎಲ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಕತ್ತಿ ನನ್ನ ಜೊತೆ ಬಹಳ ಆತ್ಮೀಯವಾಗಿದ್ದರು. ನಾನು ಕೂಡ ಬೆಳಗಾವಿಗೆ ಹೋಗುತ್ತೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಉಮೇಶ್‌ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ