NEWSನಮ್ಮಜಿಲ್ಲೆಸಂಸ್ಕೃತಿ

ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು, ಕರು, ಎತ್ತು, ಹೋರಿ ಹಾಗೂ ಎಮ್ಮೆ ಮುಂತಾದ ಗೋವು ಜಾನುವಾರುಗಳ ಹತ್ಯೆಗಳು, ಹಾಗೇ ಇಂತಹ ಸಂದರ್ಭದಲ್ಲಿ ಪ್ರಾಣಿಗಳ ಕಳ್ಳ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

ಇನ್ನು ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯ. ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿಯನ್ನು ನೀಡಿ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!