NEWSನಮ್ಮಜಿಲ್ಲೆನಮ್ಮರಾಜ್ಯ

ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡೇಶ್ವರಿ ದರ್ಶನದ ವೇಳೆ ಮೊಬೈಲ್​ ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡು ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು. ಈ ವೇಳೆ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.

ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಿದ್ದೇವೆ. ಹಾಗಿಯೇ ಭಕ್ತಾದಿಗಳಿಗೆ ಸೌಲಭ್ಯ ಒದಗಿಸಲು ಪ್ರಾಧಿಕಾರ ರಚನೆ ಮಾಡಲಾಗಿದ್ದು, ಅಪರಾಧ ತಡೆಗಟ್ಟಲು ಟಾಸ್ಕ್​ಫೋರ್ಸ್​ ರಚನೆ ಮಾಡುತ್ತೇವೆ ಎಂದರು.

ಇನ್ನು ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ