CRIMENEWSಬೆಂಗಳೂರು

ಬನಶಂಕರಿ ವಿದ್ಯುತ್ ಚಿತಾಗಾರ ಏ.29ರಿಂದ 10 ದಿ‌ನಗಳು ತಾತ್ಕಾಲಿಕ ಸ್ಥಗಿತ: ಉಮೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ನಾಳೆಯಿಂದ 10 ದಿ‌ನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ದಕ್ಷಿಣ ವಲಯ ವಿದ್ಯುತ್ ವಿಭಾಗ ಕಾರ್ಯಪಾಲಕ ಅಭಿಯಂತರ ಉಮೇಶ್ ತಿಳಿಸಿದ್ದಾರೆ.

ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದ ಎರಡು ಪರ್ನೆಸ್‌ಗಳ ಕಾಯಿಲ್‌ಗಳು ಹಾಗೂ ಬ್ರಿಕ್ಸ್‌ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕೆಲಸವಿರುವುದರಿಂದ ಏ.29 ರಿಂದ ಮೇ 8 ವರೆಗೂ ಅಂದರೆ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಬೇರೆ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿ ಕೊಳ್ಳಬಹುದಾಗಿದೆ ಎಂದು ಉಮೇಶ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಉಮೇಶ್, ಕಾರ್ಯಪಾಲಕ ಅಭಿಯಂತರರು, ವಿದ್ಯುತ್ ವಿಭಾಗ, ದಕ್ಷಿಣ ವಲಯ ಮೊ.ಸಂ: 9480688539 ಸಂಪರ್ಕಿಸಬಹುದಾಗಿದೆ.

Deva
the authorDeva

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...