NEWSನಮ್ಮಜಿಲ್ಲೆಶಿಕ್ಷಣ

ಬೆಂ.ಗ್ರಾ: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2025-26ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲೂಕು.

ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ, ದೇವನಹಳ್ಳಿ ತಾಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲೂಕು. ಇಲ್ಲಿಗೆ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ತಾವು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಮೇ 19 ರ ಒಳಗೆ ಬಂದು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!