NEWSನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರಿಗರು, ಕಲಾವಿದರು ಕಾವೇರಿ ಹೋರಾಟಕ್ಕೆ ಇಳಿಯಲೇ ಬೇಕು – ಮು. ಚಂದ್ರು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕಾಂಗ್ರೆಸ್ಸಿಗರು ಕೇವಲ ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮೇಕೆದಾಟು ಯೋಜನೆಯನ್ನು ಬಳಸಿಕೊಂಡರೆ ಹೊರತು ಸರ್ಕಾರ ಬಂದ ಬಳಿಕ ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ರಚನಾತ್ಮಕವಾದಂತ ಹೋರಾಟವನ್ನು ನಡೆಸುತ್ತಿಲ್ಲ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.

ರಾಮನಗರದಲ್ಲಿ ಇಂದು ಆಯೋಜಿಸಿದ್ದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಸಂದರ್ಭದಲ್ಲಿ ತಮಿಳುನಾಡಿಗೆ ನೀರನ್ನು ಬಿಟ್ಟರೆ ಬೆಂಗಳೂರಿನ ಒಂದು ಕೋಟಿ 35 ಲಕ್ಷ ನಾಗರಿಕರಿಗೆ ಕುಡಿಯುವ ನೀರಿನ ಬವಣೆ ಖಂಡಿತ ತಪ್ಪಿದ್ದಲ್ಲ ಎಂದು ಎಚ್ಚರಿಸಿದರು.

ಇನ್ನು ಸರ್ಕಾರಗಳು ಯಾವ್ಯಾವ ಕಾರಣಕ್ಕೂ ಸುಗ್ರೀವಾಜ್ಞೆಯನ್ನು ಹೊರಡಿಸುತ್ತವೆ. ಆದರೆ ಕನ್ನಡಿಗರ ಜ್ವಲಂತ ಕುಡಿಯುವ ನೀರಿನ ಸಮಸ್ಯೆ ಇರುವ ಈ ಸಂದರ್ಭದಲ್ಲಿ ಧೈರ್ಯವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸ ಹಿಂದೇಟು ಹಾಕುತ್ತಾರೆ. ಆದರೆ ಈಗ ಸುಗ್ರೀವಾಜ್ಞೆಯನ್ನು ಹೊರಡಿಸಬೇಕೆಂದು ಆಗ್ರಹಿಸಿದರು.

ಈ ಹೋರಾಟ ಕೇವಲ ಮಂಡ್ಯ ಭಾಗದ ರೈತರ ಹೋರಾಟ ಎಂಬುದನ್ನು ಮರೆತು ಇದು ಸಮಸ್ತ ಕನ್ನಡಿಗರ ಅದರಲ್ಲೂ ಬೆಂಗಳೂರಿಗರ ಹೋರಾಟ ಎಂದು ಮನ ಗಂಡು ಬೆಂಗಳೂರಿಗರೆಲ್ಲರೂ ಹಾಗೂ ಎಲ್ಲ ಕಲಾವಿದರು ಒಂದಾಗಿ ಈ ಹೋರಾಟದಲ್ಲಿ ಭಾಗಿಯಾಗಬೇಕೆಂದು ಕರೆ ನೀಡಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು