ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವೂ ನಾಡ ದೇವತೆ ಶ್ರೀ ಚಾಮುಂಡೇಶ್ವರಿಯ ಅಮ್ಮನವರ ಹಬ್ಬ ಇಂದು (ಸೆ.26) ಬೀಡನಹಳ್ಳಿ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ.
ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಇದಕ್ಕೂ ಮುನ್ನಾ ಬನ್ನೂರು ಸಮೀಪ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಮಾರಮ್ಮ ಹಾಗೂ ಮುತ್ತತ್ತಿರಾಯನ ಪೂಜೆಗಳನ್ನು ಹೂ ಹೊಂಬಾಳಿ ಮಾಡಿಕೊಂಡು ಬರುವ ಮೂಲಕ ಹಬ್ಬದ ಸಡಗರವಿಲ್ಲ ಇಮ್ಮಡಿಗೊಳ್ಳಲಿದೆ.
ಇನ್ನು ಗ್ರಾಮದ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ನವರಾತ್ರಿಯ ಐದನೆ ದಿನವಾದ ಇಂದು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ಜತೆಗೆ ಗ್ರಾಮದ ರಾಜ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕರವನ್ನು ಮಾಡಲಾಗಿದ್ದು ರಾಜ ಬೀದಿಗಳು ಚಿತ್ತಾರದಿಂದ ಕಂಗೊಳಿಸುತ್ತಿವೆ.
ಹಬ್ಬದ ಅಂಗವಾಗಿ ಗ್ರಾಮ ದೇವತೆ ಚಾಮುಂಡಿಗೆ ವಿಶೇಷ ಮೊದಲ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.
ಇಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ತಾಯಿ ಚಾಮುಂಡಿಯ ದೇವಸ್ಥಾನವನ್ನು ತಲುಪುತ್ತಾರೆ.

ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ನಾಡದೇವತೆಗೆ ಪೂಜೆ ನೆರವೇರಿಸುತ್ತಾರೆ.
ಇದಕ್ಕೂ ಮುನ್ನ ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಚಾಮುಂಡಿ ದೇವಸ್ಥಾನ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು.
ಹೆಂಗಳೆಯರು ಹೊತ್ತು ತಂದ ಪೂಜಾರತಿಗೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ದೇವಾಲಯದಾವರಣದಲ್ಲೇ ಗ್ರಾಮದೇವತೆ ಚಾಮುಂಡಿಗೆ ಪೂಜೆ ನೆರವೇರಿಸಲಾಗುವುದು.
Related
