NEWSನಮ್ಮಜಿಲ್ಲೆಸಂಸ್ಕೃತಿ

ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.18) ಮತ್ತು ಬುಧವಾರ (ಫೆ.19) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಬಾರಿ ಬೀಡನಹಳ್ಳಿಯಲ್ಲಿ ಮಾರಿಹಬ್ಬದ ಸಂಭ್ರಮ ಇಲ್ಲ.

ಹೌದು! ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರೂ ಆದ ದೇವರಗುಡ್ಡ ವಯೋಸಹಜವಾಗಿ ನಿಧನರಾಗಿರುವುದರಿಂದ ಹಬ್ಬವನ್ನು ಈ ಬಾರಿ ಮಾಡದಂತೆ ಗ್ರಾಮದ ಮುಖಂಡರು ನಿರ್ಧರಿಸಿರುವುದರಿಂದ ಹಬ್ಬದ ಸಡಗರವಿಲ್ಲ.

ಇನ್ನು ಉಳಿದ ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿ ಗ್ರಾಮಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ಫೆ. 18 ಮತ್ತು 19ರಂದು ಹಬ್ಬ ಆಚರಣೆ ಮಾಡಲಾಗುತ್ತಿದೆ.

ಹಬ್ಬದ ಅಂಗವಾಗಿ ಮಂಗಳವಾರ ಆಯಾಯ ಗ್ರಾಮ ದೇವತೆ ಮಾರಮ್ಮನಿಗೆ ವಿಶೇಷ ಮೊದಲ ಪೂಜೆ (ತಂಪು ಸೇವೆ) ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಇಂದು ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.

ಬುಧವಾರ (ನಾಳೆ) ಮುಂಜಾನೆ ಮಡೆ ಊಯುವರು: ಉತ್ತನಹಳ್ಳಿ ಮಾರಮ್ಮನಿಗೆ ಗ್ರಾಮದ ಪ್ರತಿ ಮನೆಯಿಂದ ಒಬ್ಬರಂತೆ ಮುಂಜಾನೆ 4.30ರಲ್ಲಿ ಒಂದೆಡೆ ಸೇರಿ ಮಡೆ ಊಯ್ಯುವರು. (ಹೊಸ ಮಡಿಕೆ, ತಂದು ಅದರಲ್ಲಿ ಅಕ್ಕಿ, ಬೇಳೆ, ಉಪ್ಪು ಅದಕ್ಕೆ ತಕ್ಕಷ್ಟು ನೀರು ಹಾಕಿ ಅನ್ನಮಾಡುವುದು) ನಂತರ ಈ ಅನ್ನ ಪ್ರಸಾದ ಸಿದ್ಧವಾಎ ಮಡಿಕೆಯ ಬಾಯಿಯನ್ನು ಅಡಕೆಯ ಎಲೆ( ಒಡಾಳೆ)ಯಿಂದ ಮುಚ್ಚಿ ಅದನ್ನು ಒಡಾಳೆ ದಾರದಿಂದಲೇ ಕಟ್ಟುತ್ತಾರೆ. ಈ ವೇಳೆ ಜವನ ಬೇವಿನ ಸೊಪ್ಪು ಕಟ್ಟುವ ಮೂಲಕ ಅಲಂಕರಿಸಿ ತಾವು ಮಡೆ ಊಯ್ಯಿದಿರುವ ಮಡಿಕೆಯನ್ನು ಗುರುತು ಹಾಕಿಕೊಂಡು ಬರುತ್ತಾರೆ.

ಮತ್ತೆ ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ಮಡೆ ಊಯ್ಯಿದಿರುವ ಸ್ಥಳ ತಲುಪುತ್ತಾರೆ.

ಈ ಸ್ಥಳದಲ್ಲಿ ತಮ್ಮ ಮುಂಜಾನೆ ಮಡೆ ಊಯ್ಯಿದಿರುವ ಮಡಿಕೆಯ ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ಪೂಜೆ ನೆರವೇರಿಸುತ್ತಾರೆ.

ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಮಡೆ ಊಯ್ಯಿದಿರುವ ಸ್ಥಳಕ್ಕೆ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು. ಆದರೆ ಈ ಬಾರಿ ಬೀಡನಹಳ್ಳಿಯಲ್ಲಿ ಇಲ್ಲ.

ಮಡೆಗಳ ಮೇಲೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ಮಡೆ ಊಯ್ಯಿದಿರುವ ಮಡಿಕೆಗಳನ್ನು ಹೊತ್ತು ಮನೆಗಳಿಗಳತ್ತ ಗ್ರಾಮದ ಯುವಕರು ತೆರಳುವರು. ಇನ್ನು ಮನೆ ಬಾಗಿಲ ಬಳಿ ಮಡೆ ಹೊತ್ತವರ ಪಾದಪೂಜೆಯನ್ನು ಅಂದರೆ ಗಂಗೆಯನ್ನೆರೆಯುವ ಮೂಲಕ ದೇವರ ಸ್ವರೂಪಿ ಎಂದು ಮಡೆಯನ್ನು ಮನೆಗೆ ಬರಮಾಡಿಕೊಳ್ಳುವರು. ಆ ಮಡೆ ಪ್ರಸಾದವನ್ನು ಮನೆಯ ಪ್ರತಿ ಸದಸ್ಯರು ಸ್ವೀಕರಿಸುವರು. ಈ ಮೂಲಕ ಮಡೆ ಪ್ರಸಾದ ಪೂರ್ಣಗೊಳ್ಳುವುದು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿ... ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ “ಸಂಚಾರಿ ಪ್ರಯೋಗಾಲಯ”: ಡಿಸಿಎಂ ವೀಕ್ಷಣೆ "ನಮ್ಮ ರಸ್ತೆ 2025" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ ಸರ್ಕಾರ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ ದೇಹಲಿ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇಖಾ ಗುಪ್ತಾ KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!