NEWSನಮ್ಮಜಿಲ್ಲೆ

ಬನ್ನೂರು: ಬಸ್‌ಗಾಗಿ ನರಕ ಯಾತನೆ ಅನುಭವಿಸುತ್ತಿರುವ ವಿದ್ಯಾರ್ಥಿಗಳು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ಬನ್ನೂರು ಹೋಬಳಿಯ ಸುತ್ತ ಮುತ್ತಲ ಗ್ರಾಮೀಣ ಭಾಗದಿಂದ ಬನ್ನೂರು, ಸಂತೇಮಾಳದ ಶಾಲೆ- ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಸಮರ್ಪಕವಾದ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ.

ಮಳವಳ್ಳಿ- ಮೈಸೂರು, ತಿ.ನರಸೀಪುರ- ಮಂಡ್ಯ, ಬನ್ನೂರು ಶ್ರೀರಂಗಪಟ್ಟಣ ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದಿರುವುದರಿಂದ ನಿತ್ಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಯಾತನೆ ಅನುಭವಿಸುತ್ತಿದ್ದಾರೆ.

ಇದರಿಂದ ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗುವುದಕ್ಕೂ ಆಗುತ್ತಿಲ್ಲ ಮತ್ತೆ ಮನೆ ಸೇರುವುದಕ್ಕೂ ಆಗುತ್ತಿಲ್ಲ. ಇನ್ನು ಬರುವ ಬಸ್‌ಗಳಿಗೆ ಹತ್ತಲು ಹರ ಸಾಹಸ ಪಡುವಂತಾಗಿದೆ. ಹೀಗಿದ್ದರೂ ಈ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲ. ಇಷ್ಟಲ್ಲ ಸಮಸ್ಯೆಗಳನ್ನು ಸ್ಥಳೀಯ ಜನ ಪ್ರತಿನಿಧಿಗಳು ಕಂಡರೂ ಕಾಣದಂತೆ ಕೈಕಟ್ಟಿ ಮೂಕ ಪ್ರೇಕ್ಷಕರಾಗಿದ್ದಾರೆ.

ಇಂದಿನ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮಹಿಳೆಯರಿಗಾಗಿಯೇ ಶಕ್ತಿ ಯೋಜನೆ ಜಾರಿ ಮಾಡಿದ್ದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶ ನೀಡಿದೆ. ಮಹಿಳೆಯರು ಹೆಚ್ಚು ಪ್ರಯಾಣ ಮಾಡುತ್ತಿರುವುದು ವಿಶೇಷವಾಗಿದೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್‌ಗಳ ಸೇವೆ ಇಲ್ಲದೆ ಶಾಲೆ ಕಾಲೇಜು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.

ಇನ್ನು ಇತ್ತ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸಬೇಕಾದ ಕೆಎಸ್‌ಆರ್‌ಟಿಸಿ ಇರುವ ಬಸ್‌ಗಳ ಸಂಖ್ಯೆಯನ್ನೇ ಕಡಿಮೆ ಮಾಡಿದೆ. ಇದು ಇನ್ನಷ್ಟು ಸಮಸ್ಯೆ ಸೃಷ್ಟಿಗೆ ಕಾರಣವಾಗಿದೆ.

ಕ್ರಮಕ್ಕೆ ಆಗ್ರಹ: ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ ಅವರು ಇತ್ತ ಗಮನ ಹರಿಸಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬರುವಂತೆ ಮತ್ತು ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು