NEWSಕೃಷಿನಮ್ಮಜಿಲ್ಲೆ

ಬನ್ನೂರು: ರೈತ ಹೋರಾಟದ ವೇಳೆ ಪೊಲೀಸರ ಗೋಲಿಬಾರ್‌ಗೆ ಹುತಾತ್ಮರಾದ ರೈತರಿಗೆ ಶ್ರದ್ಧಾಂಜಲಿ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗವಹಿಸಿದ್ದ ಅನ್ನದಾತರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್‌ನಿಂದ ಮಡಿದ ರೈತರಿಗೆ ಬನ್ನೂರಿನ ಸಂತೆಮಾಳ ಬಳಿ ಮೈಸೂರು – ಮಳವಳ್ಳಿ ಮುಖ್ಯ ರಸ್ತೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಬನ್ನೂರು ಗ್ರಾಮಾಂತರ ಘಟಕದಿಂದ ಭಾನುವಾರ ರಾತ್ರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರಾಜ್ಯ ರೈತ ಸಂಘಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಜಿಲ್ಲಾ ಸಮಿತಿಯಿಂದ ದೆಹಲಿಯ ರೈತರ ಹೋರಾಟದ ವೇಳೆ ಪೊಲೀಸರ ಗೋಲಿಬಾರ್‌ನಿಂದ ಮಡಿದ ರೈತರಿಗೆ ಇಂದು ಮೇಣದ ಬತ್ತಿಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೇಂದ್ರ ಸರ್ಕಾರ ರೈತರ ಸಮಸ್ಯೆ ನೀಗಿಸುವಂತೆ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಪೊಲೀಸ್ ದುರ್ಬಳಕೆ ಮಾಡಿ ರೈತರ ಹೋರಾಟವನ್ನು ಹತ್ತಿಕ್ಕಲು ಗೋಲಿಬಾರ್ ನಡೆಸಿ ರೈತರನ್ನು ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಗೋಲಿಬಾರ್‌ನಲ್ಲಿ ಪ್ರಾಣ ಕಳೆದುಕೊಂಡ ಯುವ ರೈತರ ಕುಟುಂಬಕ್ಕೆ ಪಂಜಾಬ್ ಸರ್ಕಾರ ಒಂದು ಕೋಟಿ ರೂ.ಗಳ ಪರಿಹಾರ ನೀಡಿದೆ ಹಾಗೂ ಅವರ ಕುಟುಂಬಕ್ಕೆ ಉದ್ಯೋಗ ನೀಡಲು ಭರವಸೆ ನೀಡಿದೆ.

ಆದರೆ, ಗೋಲಿಬಾರ್ ಮಾಡಿದ ಪೊಲೀಸ್ ಅಧಿಕಾರಿಯ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

ರೈತರ ಹೋರಾಟವನ್ನು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ಮುಂದೆ ಬರುವ ಚುನಾವಣೆಯಲ್ಲಿ ಹಾಲಿ ಇರುವ ಸಂಸದರನ್ನು ಸೋಲಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಎಚರಿಸಿದರು.

ಫೆ.26ರಂದುರಾಜ್ಯಾದ್ಯಂತ ಎಂಪಿಗಳ ಮನೆ ಕಚೇರಿಗಳ ಮುಂದೆ ಹೋರಾಟ ನಡೆಸಿ ನಿದ್ರಾವಸ್ಥೆಯಲ್ಲಿರುವ ಸಂಸದರನ್ನು ಎಚ್ಚರಿಸಲಾಗುವುದು. ಈಗಲಾದರೂ ರೈತರ ಹೋರಾಟದ ಪರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂದೆ ಹೋರಾಟ ಮಾಡಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಇಂದಿನ ಶ್ರದ್ಧಾಂಜಲಿ ಸಭೆಯಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಬನ್ನೂರು ಸೂರಿ, ಅತ್ತಹಳ್ಳಿ ಕಾರ್ಮಿಕ ಮುಖಂಡ ಶಿವರಾಜ್, ಮೆಡಿಕಲ್ ಮಹೇಶ್, ನಂದಿಸ್ಟೋರ್ ನಟೇಶ್, ಹನುಮನಾಳು ಲೋಕೇಶ್, ಕುಂತನಹಳ್ಳಿ ಸ್ವಾಮಿ, ಬನ್ನೂರು ಹೊನ್ನಯ್ಯ, ಲೋಕೇಶ್, ವಿನಯ್, ಮಾದಿಗಹಳ್ಳಿ ಜಗದೀಶ್, ಗಾಡಿಜೋಗಿಹುಂಡಿ ಕರಗೇಗೌಡ, ಚಾಮನಹಳ್ಳಿ ಕೊಪ್ಪಲು ರಮೇಶ್ ಇನ್ನು ಮುಂತಾದವರು ಇದ್ದರು.

Leave a Reply

error: Content is protected !!
LATEST
ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು