CrimeNEWSನಮ್ಮಜಿಲ್ಲೆ

ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಮೈಸೂರು-ಮಳವಳ್ಳಿ ಮುಖ್ಯರಸ್ತೆ ದಾಟುತ್ತಿದ್ದ ವೇಳೆ ಎರಡು ವರ್ಷದ ಹೆಣ್ಣು ಚಿರತೆ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೂರು ಹೋಬಳಿಯ ಬಸವನಹಳ್ಳಿ- ಚಾಮನಹಳ್ಳಿ ಮಧ್ಯೆ ನಡೆದಿದೆ.

ಒಂದು ತಾಯಿ ಎರಡು ಮರಿ ಚಿರತೆಗಳು ಗುರುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ತಾಯಿ ಚಿರತೆ ಮತ್ತು ಇನ್ನೊಂದು ಮರಿ ಚಿರತೆ ಓಡಿಹೋಗಿದ್ದು, ಈ ಹೆಣ್ಣು ಚಿರತೆ ಬೈಕ್‌ಗೆ ಸಿಕ್ಕಿ ಮೃತಪಟ್ಟಿದೆ. ಈ ವೇಳೆ ಗಾಬರಿಗೊಂಡ ಬೆಂಡರವಾಡಿ ಗ್ರಾಮದ ಬೈಕ್‌ ಸವಾರರು ಬಿದ್ದು ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಬನ್ನೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್‌. ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಬೈಕ್‌ ಸವಾರರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅರಣ್ಯ ಅಧಿಕಾರಿ ಮಂಜುನಾಥ್ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ, ಹೆಣ್ಣು ಚಿರತೆ ಸಾವದಪ್ಪಿದ್ದು, ತಮ್ಮ ವಶಕ್ಕೆ ಪಡೆದು ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಬನ್ನೂರು ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಓಡಾಟ ಹೆಚ್ಚಾಗಿದ್ದು,  ಅರಣ್ಯ ಅಧಿಕಾರಿಗಳು  ಈ ಚಿರತೆಗಳನ್ನು ಸೆರೆ ಹಿಡಿದು ದಟ್ಟಾರಣ್ಯಕ್ಕೆ ಬಿಡಬೇಕು ಎಂದು ಬಸವನಹಳ್ಳಿ ಗ್ರಾಮದ ಮಹೇಶ್‌ ಎಂಬುವರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ