CRIMENEWSನಮ್ಮಜಿಲ್ಲೆ

ಬನ್ನೂರು: ಅಕ್ಕಿ ತುಂಬಿದ ಮಿನಿಲಾರಿ ಪಲ್ಟಿ- ಇಬ್ಬರು ಕೂಲಿ ಕಾರ್ಮಿಕರು ಮೃತ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಅಕ್ಕಿ ತುಂಬಿದ ಮಿನಿಲಾರಿ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಗುರುವಾರ ಬೆಳಿಗೆ ಜರುಗಿದೆ.

ಬನ್ನೂರಿನ ನಿವಾಸಿಗಳಾದ ವಾಸಿಂ (25) ಹಾಗೂ ಸನಿಯಾ (24) ಮೃತಪಟ್ಟ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ.

ಕಿರುಗಾವಲು ಬಾಸ್ ರೈಸ್‌ಮಿಲ್‌ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿಲಾರಿ ಕೊದನುಕೊಪ್ಪಲು ಬಳಿ ಬರುತ್ತಿದ್ದಂತೆ ನಡು ಮಾರ್ಗದಲ್ಲಿ ಪಲ್ಟಿ ಹೊಡೆದೆ. ಪರಿಣಾಮ ಈ ಇಬ್ಬರು ಕೂಲಿ ಕಾರ್ಮಿಕರು ಅಸುನೀಗಿದ್ದಾರೆ.

ಕಿರುಗಾವಲಿನ ರೈಸ್‌ಮಿಲ್‌ನಿಂದ ಅಕ್ಕಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಪಡಿತರ ಅಕ್ಕಿಯೋ ಅಥವಾ ರೈತರಿಂದ ಖರೀದಿಸಿದ ಭತ್ತದ ಅಕ್ಕಿಯೋ ಇದ್ದಿದ್ದು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಈ ಪ್ರಕರಣ ಸಂಬಂಧ ಕಿರುಗಾವಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಎಸ್‌ಐ ರವಿಕುಮಾರ್ ಮುಂದಿನ ಕ್ರಮ ಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸರ್ಕಾರಿ ನೌಕರ ಪರೋಕ್ಷವಾಗಿ ಬೇರೊಬ್ಬರ ಮೂಲಕ ಲಂಚ ಪಡೆದರೂ ಆತ ತಪ್ಪಿತಸ್ಥನೆ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಇಂದಿನಿಂದ ಜಾರಿ: ಕರೆಂಟ್‌ ಬಿಲ್‌ಕೊಟ್ಟ ದಿನದಿಂದ ರಜೆ ಹೊರತುಪಡಿಸಿ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಸರ್ಕಾರಿ ಸಾರಿಗೆ ಚಾಲನಾ, ತಾಂತ್ರಿಕಾ ಸಿಬ್ಬಂದಿ ಕಾರ್ಮಿಕರಲ್ಲ: “ಸಂಸ್ಥೆ ನಿಯಮಗಳ ಮೂಲಕ ಯಾರು ನೇಮಕವಾಗಿದ್ದಾರೋ ಅವರೇ ಅ... ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು