ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋ ಲೈಯಿಂಗ್ ಪ್ರದೇಶದಲ್ಲಿ ಇನ್ನು ಮುಂದೆ ಬೇಸ್ಮೆಂಟ್ ಮಾಡಲು ಅವಕಾಶ ಇರುವುದಿಲ್ಲ. ಅಲ್ಲಿ ಸ್ಟಿಲ್ಟ್ ಫ್ಲೋರ್ ಮಾಡಲು ಅವಕಾಶ ನೀಡಲಾಗುತ್ತದೆ. ಬೇಸ್ ಮೆಂಟ್ಗೆ ನೀರು ನುಗ್ಗುವುದನ್ನು ತಪ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇನ್ನು ಮಾನ್ಯತಾ ಟೆಕ್‌ಪಾರ್ಕ್ ಬಳಿ ರಾಜಕಾಲುವೆ ಒತ್ತುವರಿಯಾಗಿದ್ದು, ಕೂಡಲೇ ತೆರವಿಗೆ ಸೂಚನೆ ನೀಡಿದ್ದೇನೆ. ಈ ಭಾಗದ ರಸ್ತೆಯಲ್ಲಿ 90 ದಿನದಲ್ಲಿ ಒಳಚರಂಡಿ ನಿರ್ಮಿಸಿ ಕೊಡುವುದಾಗಿ ಮಾನ್ಯತಾ ಟೆಕ್‌ಪಾರ್ಕ್ ಸಿಇಒ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಎಚ್ಬಿಆರ್ ಬಡಾವಣೆ 5ನೇ ಹಂತದಲ್ಲಿ ರಾಜಕಾಲುವೆ ಸಮಸ್ಯೆ ಇದೆ. ಅಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಆಗುತ್ತಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಸವನ್ನು ಚರಂಡಿಗೆ ಹಾಕುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಸಾಯಿಲೇಔಟ್ ತಗ್ಗು ಪ್ರದೇಶ: ಬಿಡಿಎ ಜಾಗದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಆದ ಒತ್ತುವರಿ ತೆರವಿಗೆ ಸೂಚಿಸಿದ್ದೇನೆ. ಸಾಯಿ ಲೇಔಟ್ ತಗ್ಗು ಪ್ರದೇಶದಲ್ಲಿದೆ. ಹಾಗಾಗಿ ಮಳೆ ಹೆಚ್ಚು ಬಂದಾಗ ಸಮಸ್ಯೆ ಆಗುತ್ತಿದೆ. ರೈಲ್ವೇ ಬ್ರಿಡ್ಜ್ನ ವೆಂಟ್ ಕಿರಿದಾಗಿದೆ. ಅದನ್ನು ದೊಡ್ಡದು ಮಾಡಿದರೆ ಸಮಸ್ಯೆ ಪರಿಹಾರ ಆಗುತ್ತದೆ. ಅನೇಕ ವರ್ಷಗಳಿಂದ ಈ ಸಮಸ್ಯೆ ಆಗುತ್ತಿದೆ ಎಂದರು.
ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಯಿಂದ ನೀರು ಬರುತ್ತದೆ. ಹೀಗಾಗಿ ನೀರು ರಸ್ತೆ ಮೇಲೆ ಬರುತ್ತಿದೆ. ಮೆಟ್ರೋ, ಬಿಬಿಎಂಪಿ, ಎನ್ಹೆಚ್ ಮೂರು ಜನ ಸೇರಿ ಕೆಲಸ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲರೂ ಕೂತು ತೀರ್ಮಾನ ಮಾಡಲು ಸೂಚಿಸಿದ್ದೇನೆ. ಗುರಪ್ಪನಪಾಳ್ಯದಲ್ಲಿ ತಡೆಗೋಡೆ ಕುಸಿದು ಬಿದ್ದಿದೆ. ಹೀಗಾಗಿ ಮನೆಗಳಿಗೆ ನೀರು ನುಗ್ಗಿದೆ ಎಂದು ಹೇಳಿದರು.
ಮಹದೇವಪುರದ ಪಣತ್ತೂರು ಗಾರ್ಡನ್ನಲ್ಲಿ ನೀರು ಹರಿಯಲು ಸಮಸ್ಯೆ ಆಗುತ್ತಿದೆ. ರಸ್ತೆಯಲ್ಲಿ ಸುಮಾರು ನಾಲ್ಕು ಅಡಿಯಷ್ಟು ನೀರು ನಿಲ್ಲುತ್ತದೆ. ರೈಲ್ವೇ ಅಂಡರ್ ಪಾಸ್ ಅಗಲ 30 ಅಡಿ ಇದೆ. ಇದನ್ನು 30 ಅಡಿ ವಿಸ್ತರಣೆ ಮಾಡಬೇಕು. ರಸ್ತೆ ಅಗಲೀಕರಣ ಮಾಡಬೇಕು. ಈಗಾಗಲೇ ಇದರ ಕಾಮಗಾರಿಗಳು ಆರಂಭವಾಗಿದ್ದು, 80% ಕಾಮಗಾರಿ ಪೂರ್ಣವಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇವೆ. 45 ದಿನಗಳಲ್ಲಿ ಪೂರ್ಣ ಕೆಲಸ ಮುಗಿಸಲು ಸೂಚನೆ ನೀಡಲಾಗಿದೆ. ಟ್ರಂಚ್ ಲೆಸ್ ತಂತ್ರಜ್ಞಾನ ಬಳಸಿ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸರ್ವೆ ಮಾಡಿ ಪರಿಹಾರ: ಮಳೆಗೆ ಮನೆ ಹಾನಿಯಾದ ಕಡೆ ಸರ್ವೆ ಮಾಡಿ, ನಷ್ಟ ಆದವರಿಗೆ ಪರಿಹಾರ ಕೊಡಲು ಸೂಚನೆ ನೀಡಿದ್ದೇನೆ. ಒಂದು ಲಕ್ಷ ರೂಪಾಯಿ ಪರಿಹಾರ ಕೇಳುತ್ತಿದ್ದಾರೆ. ಎಷ್ಟು ಪರಿಹಾರ ಕೊಡಬೇಕು ಎಂಬುದು ಸರ್ವೆ ಮಾಡಿದ ಬಳಿಕ ತೀರ್ಮಾನ ಮಾಡಲಿದ್ದೇವೆ. ತಕ್ಷಣ ಸರ್ವೆ ಮಾಡಿ ಪರಿಹಾರ ಕೊಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಬಿಟಿಎಂ ಲೇಔಟ್ನಲ್ಲಿ ವಿದ್ಯುತ್ ತಗುಲಿ ಇಬ್ಬರು ಸಾವಿಗೀಡಾಗಿದ್ದಾರೆ. ಅವರ ಕುಟುಂಬಕ್ಕೆ ಪಾಲಿಕೆಯಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗಿದೆ. ಬೆಸ್ಕಾಂನಿಂದಲೂ ಐದು ಲಕ್ಷ ರೂ. ಪರಿಹಾರ ಕೊಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರೆಡ್ ಕಾರ್ಪೆಟ್ ಬಿಜೆಪಿಯವರ ಸೃಷ್ಟಿ: ಭೇಟಿಯ ವೇಳೆ ರೆಡ್ ಕಾರ್ಪೆಟ್ ಹಾಕಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಅವರು, ಇದೆಲ್ಲವೂ ಬಿಜೆಪಿಯ ಸೃಷ್ಟಿ. ಯಾವುದೇ ರೆಡ್ ಕಾರ್ಪೆಟ್ ಹಾಕಿಲ್ಲ. ಪ್ರೊಟೊಕಾಲ್ ಪ್ರಕಾರ ಬಿಬಿಎಂಪಿ ಅಧಿಕಾರಿಗಳು ನನ್ನನ್ನು ಆಹ್ವಾನಿಸಿದ್ದಾರೆ. ಒಂದು ವೇಳೆ ರೆಡ್ ಕಾರ್ಪೆಟ್ ಹಾಕಿದ್ದರೆ ಅದು ತಪ್ಪು. ಇಂಥದ್ದೊಂದು ವಿಡಿಯೋವನ್ನು ಬಿಜೆಪಿಯೇ ಸೃಷ್ಟಿಸಿದೆ. ಭೇಟಿ ವೇಳೆ ಬಿಜೆಪಿ ಶಾಸಕರೂ ಇದ್ದರು ಎಂದರು.
ಬೆಂಗಳೂರಲ್ಲಿ ರಾಜಕಾಲುವೆ ಸುಮಾರು 860 ಕಿ.ಮೀ. ಇದೆ. 491 ಕಿ.ಮೀ. ರಾಜ ಕಾಲುವೆಯಲ್ಲಿ ಲೈನಿಂಗ್ ಕಾಮಗಾರಿ ಪೂರ್ಣವಾಗಿದೆ. 195 ಕಿ.ಮೀ. ರಾಜಕಾಲುವೆ ಕೆಲಸ ನಡೆಯುತ್ತಿದೆ. ಫೆಬ್ರವರಿ 2026ರಂದು ಕೆಲಸ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. 173 ಕಿ.ಮೀ. ರಾಜಕಾಲುವೆ ಕಾಮಗಾರಿಗಳಿಗೆ ವಿಶ್ವಬ್ಯಾಂಕ್ನಿಂದ ಸಾಲ ಪಡೆಯಲಾಗಿದೆ. ಇದರ ಟೆಂಡರ್ ಆಗಿದೆ. 2,000 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಮೂರು ವರ್ಷದಲ್ಲಿ ಇದರ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....