BBMP: ಡೆಂಗ್ಯೂ ನಿಯಂತ್ರಣಕ್ಕೆ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರ ನೇಮಕ: ಸಚಿವ ಗುಂಡೂರಾವ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ತಡೆಗಟ್ಟಲು ಹೆಚ್ವಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಿಬಿಎಂಪಿ ವತಿಯಿಂದ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿಯೇ ಶೇ.40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.
“ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ” ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಗ್ಯೂ ತರುವ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ ಎಂದು ಹೇಳಿದರು.
ಬೆಂಗಳೂರನ್ನು ಡೆಂಗ್ಯೂ ಮುಕ್ತ ನಗರವನ್ನಾಗಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಯಂ ಸೇವಕರು, ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಗಳು, ಎಲ್ಲರೂ ಸೇರಿ ಉತ್ತಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಡೆಂಗ್ಯೂ ನಿಯಂತ್ರಣದ ಕುರಿತು ನಾಗರಿಕರಲ್ಲಿ ಜಾಗೃತಿ: ಕಾರ್ಯಕ್ರಮಕ್ಕೂ ಮುಂಚೆ ಮಾನ್ಯ ಸಚಿವರು ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಡೆಂಗ್ಯೂ ಲಾರ್ವಾ ಉತ್ಪತ್ತಿ ತಾಣವಾದ ಶುದ್ಧ ನೀರಿನ ಘಟಕಗಳಾದ ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಹಳೆಯ ಟೈರ್ ಗಳು, ತೆಂಗಿನ ಚಿಪ್ಪುಗಳಲ್ಲಿ ಈಡಿಸ್ ಸೊಳ್ಳೆ ಲಾರ್ವಾಗಳನ್ನು ಉತ್ಪಿಸುತ್ತದೆ. ಸಾಧ್ಯವಾದಷ್ಟು ಈ ಎಲ್ಲಾ ತಾಣಗಳನ್ನು ಶುಚ್ಚಿತ್ವ ಕಾಪಾಡಿಕೊಂಡರೆ ನಾವು ಡೆಂಗ್ಯೂ ಸಂಪೂರ್ಣ ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉದಯ್ ಬಿ. ಗರುಡಾಚಾರ್ ರವರು ಮಾತನಾಡಿ, ಡೆಂಗ್ಯೂ ಹರಡದಂತೆ ಮಕ್ಕಳು ಅತಿ ಜಾಗರೂಕತೆಯಿಂದ ಆರೋಗ್ಯವಂತರಾಗಿ ಇರಬೇಕು. ಉತ್ತಮ ಆಹಾರವನ್ನು ಸೇವಿಸಿ ಪ್ರತಿಯೊಬ್ಬರೂ ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕಾಗಿ ತಿಳಿಸಿದರು.
ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಮಾತನಾಡಿ, ಪ್ರತಿಯೊಬ್ಬ ನಾಗರಿಕನೂ ಡೆಂಗೀ ನಿಯಂತ್ರಣ ಕಾರ್ಯದಲ್ಲಿ ಕೈಜೋಡಿಸಿದಲ್ಲಿ ಮಾತ್ರ ಡೆಂಗ್ಯೂ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿರುವುದಾಗಿ ತಿಳಿಸಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಶಿವಕುಮಾರ್ ಕೆ.ಬಿ, ಎನ್ ಸಿವಿಬಿಡಿಸಿ ನಿರ್ದೇಶಕರಾದ ಡಾ. ತನು ಜೈನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ತ್ರಿವೇಣಿ ಎಂ, ಜಿಎನ್ ಸಿವಿಬಿಡಿಸಿ ಸಹ ನಿರ್ದೇಶಕರಾದ ಡಾ.ರಜನಿ ಎಂ., ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಯಾದ ಡಾ.ಎಸ್.ಎಸ್.ಮದನಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಶಾಲಾ ಮಕ್ಕಳು ಇತರರು ಉಪಸ್ಥಿತರಿದ್ದರು.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...