NEWSನಮ್ಮಜಿಲ್ಲೆಬೆಂಗಳೂರು

BBMP: ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಿಗೆ ಬೀಗಮುದ್ರೆ – 44,400 ರೂ. ದಂಡ ವಸೂಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಬಿಬಿಎಂಪಿ ಅಧಿಕಾರಿಗಳು ಮಳಿಗೆಗೆ ಬೀಗ ಹಾಕಿ ಸೀಲ್ ಮಾಡಿದ ಘಟನೆ ಇಂದು ನಡೆದಿದೆ.

ರಾಜರಾಜೇಶ್ವರಿ ನಗರದ ಜೆ.ಪಿ.ಪಾರ್ಕ್ ವಾರ್ಡ್ ನ ಮೋಹನ್ ಕುಮಾರ್ ಮುಖ್ಯ ರಸ್ತೆಯ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್ ನ ಐಡಿಯಲ್ ಹೋಮ್ಸ್ ನಲ್ಲಿನ ಜವಹಾರ್ ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಈಗಗಾಲೇ ಸೂನಚೆ ನೀಡಲಾಗಿತ್ತು.

ಆದರೂ ಇಂದು ಪರಿಶೀಲನೆ ನಡೆಸಿದ ವೇಳೆ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಜೆ.ಪಿ. ಪಾರ್ಕ್ ವಾರ್ಡ್ ನಲ್ಲಿ ಆರ್.ಎಸ್.ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್ ನಗರ ವಾರ್ಡ್ ನಲ್ಲಿ ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜರಾಜೇಶ್ವರಿನಗರ ವಲಯದ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ಸೂಚನೆಯಂತೆ ಬೀಗ ಹಾಕಿ ಸೀಲ್ ಮಾಡಿರುವ ಮಳಿಗೆಗಳ ಮುಂಭಾಗದಲ್ಲಿ “ಈ ಅಂಗಡಿ ಮಳಿಗಯಲ್ಲಿ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿದ್ದರೂ ಸಹ ಪ್ಲಾಸ್ಟಿಕ್ ಬಳಸುತ್ತಿದ್ದರು. ಹೀಗಾಗಿ ಹಸಿರು ನ್ಯಾಯಾಧೀಕರಣ ಮಂಡಳಿ ರಾಜ್ಯಮಟ್ಟದ ಸಮಿತಿ ನಿರ್ದೇಶನಗಳಂತೆ ಈ ಅಂಗಡಿ ಮಳಿಗೆಯನ್ನು ಮುಂದಿನ ಆದೇಶದವರೆವಿಗೂ ಪಾಲಿಕೆಯ ವತಿಯಿಂದ ಮುಚ್ಚಲಾಗಿದೆ ಎಂಬ ಬಿತ್ತಿಪತ್ರವನ್ನು ಅಂಟಿಸಲಾಗಿದೆ ಎಂದು ತಿಳಿಸಿದ್ದಾರೆ.

44,400 ರೂ. ದಂಡ ವಸೂಲಿ: ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟಾರೆ 44,400 ರೂ. ಗಳ ದಂಡ ವಸೂಲಿ ಮಾಡಲಾಗಿದೆ.

ಧ್ವನಿವರ್ಧಕಗಳ ಮೂಲಕ ಜಾಗೃತಿ: ಸಾರ್ವಜನಿಕರಿಗೆ ಮಾರ್ಷಲ್ ವಾಹನದ ಧ್ವನಿವರ್ಧಕದ ಮೂಲಕ ಹಾಗೂ ಪ್ರತಿದಿನ ಮನೆಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಆಟೋಟಿಪ್ಪರ್‌ಗಳ ಧ್ವನಿವರ್ದಕದ ಮೂಲಕ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಕೈಚೀಲವನ್ನು ಬಳಸದಂತೆ ಜಾಗೃತಿ ಮೂಡಿಸಲಾಗುತ್ತದೆ.

ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರರು ಮತ್ತು ಸಿಬ್ಬಂದಿಗಳು, ಕಾಮಗಾರಿ ವಿಭಾಗದ ಅಭಿಯಂತರರು, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಇದ್ದರು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ