ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
41ಕೆರೆ, ತಾತ್ಕಾಲಿಕ ಕಲ್ಯಾಣಿ ಹಾಗೂ 489 ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್) ಗಳ ವ್ಯವಸ್ಥೆಯನ್ನು ಬಿಬಿಎಂಪಿ ಎಲ್ಲ ವಾರ್ಡ್‌ಗಳಲ್ಲಿ ಮಾಡಲಾಗುತ್ತಿದೆ. ಜತೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಹೇರೋಹಳ್ಳಿ ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ಅವಕಾಶವಿಲ್ಲ: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿ ತಾಂತ್ರಿಕ ಕಾರಣಗಳಿಂದ ಗಣೇಶ ವಿಸರ್ಜಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದ್ದರಿಂದಾಗಿ ಸಾರ್ವಜನಿಕರು ಬದಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕೋರಿದೆ.
ಯಡಿಯೂರು ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ವ್ಯವಸ್ಥೆ: ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 17-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

Related
