Please assign a menu to the primary menu location under menu

NEWSನಮ್ಮಜಿಲ್ಲೆಬೆಂಗಳೂರು

ಚುನಾವಣಾ ಖರ್ಚಿಗಾಗಿ ಬಿಬಿಎಂಪಿ ಬಜೆಟ್ ಮಂಡನೆ : ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂಪಿ ಸದಸ್ಯರಿಲ್ಲದೇ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಜನಪ್ರತಿನಿಧಿಗಳು ಇಲ್ಲದಿದ್ದರೂ ಚುನಾವಣಾ ಖರ್ಚಿಗಾಗಿ ಅಧಿಕಾರಿಗಳಿಂದ ಬಜೆಟ್ ಮಂಡನೆ ಮಾಡಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದ್ದಾರೆ.

ಬಿಬಿಎಂಪಿ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋಹನ್ ದಾಸರಿ ಅವರು, ಇದು ಯಾವುದೇ ಅಭಿವೃದ್ಧಿಗಾಗಿ ಮಾಡುತ್ತಿರುವ ಬಜೆಟ್ ಅಲ್ಲ, ಕೇವಲ ಚುನಾವಣಾ ಖರ್ಚಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಾರಿ 12,369.46 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಬ್ರ್ಯಾಂಡ್ ಬೆಂಗಳೂರಿಗೆ 1,580 ಕೋಟಿ ರೂ. ಮೀಸಲಿಡಲಾಗಿದೆ. ನಗರದಲ್ಲಿ ವೈಟ್ ಟಾಪಿಂಗ್ ರಸ್ತೆಗೆ 800 ಕೋಟಿ ರೂ. ನೀಡಲಾಗಿದೆ. ವೈಟ್ ಟಾಪಿಂಗ್ ರಸ್ತೆಗಳ ಕಾಮಗಾರಿ ಕಳಪೆಯಾಗಿದೆ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಆದರೆ, ಹಣ ಕೊಳ್ಳೆಹೊಡೆಯಲೆಂದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ದುಬಾರಿ ವೆಚ್ಚದ ವೈಟ್ ಟಾಪಿಂಗ್ ರಸ್ತೆಗಳಿಗೆ ನೂರಾರು ಕೋಟಿ ರೂ. ವೆಚ್ಚ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಬಿಎಂಪಿ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಖಾಸಗಿ ಶಾಲೆಗಳ ಮಾಫಿಯಾಗೆ ಅಧಿಕಾರಿಗಳು, ರಾಜಕಾರಣಿಗಳು ಬೆಂಬಲವಾಗಿ ನಿಂತಿದ್ದು, ಸರ್ಕಾರಿ ಶಾಲೆಗಳನ್ನು ಮುಗಿಸುವ ಹುನ್ನಾರ ಇದಾಗಿದೆ ಎಂದು ಹೇಳಿದರು.

ಆರೋಗ್ಯ ಕ್ಷೇತ್ರವನ್ನು ಕೂಡ ಬಿಬಿಎಂಪಿ ಕಡೆಗಣಿಸಿದೆ. ಬಡ, ಮಧ್ಯಮ ವರ್ಗದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಆರೋಗ್ಯ ಸೌಲಭ್ಯ ಹೆಚ್ಚಿಸಬೇಕಿದ್ದ ಬಿಬಿಎಂಪಿ ಜನರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿದೆ ಎಂದು ಹೇಳಿದರು.

ಆದಾಯ ಹೆಚ್ಚಿಸಲು ಆಸ್ತಿ ತೆರಿಗೆಯನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಕುಡಿಯಲು ಸಮರ್ಪಕವಾಗಿ ನೀರಿಲ್ಲ, ರಸ್ತೆಗಳ ಗುಂಡಿ ಮುಚ್ಚಿಲ್ಲ, ಅಭಿವೃದ್ಧಿ ಮಾಡಲು ಆಗದಿದ್ದರೂ, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಲಾಗಿದೆ ಎಂದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ಹೆಚ್ಚಾಗುತ್ತಿದೆ. ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಬಜೆಟ್‌ನಲ್ಲಿ ಯಾವುದೇ ಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇವರಿಗೆ ಜನರ ಸಮಸ್ಯೆ ಬಗೆಹರಿಸುವುದು ಬೇಕಾಗಿಲ್ಲ, ಕೇವಲ ಭ್ರಷ್ಟಾಚಾರ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...