Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

BBMP ಪೂರ್ವ ವಲಯ: ಪಾದಚಾರಿ ಮಾರ್ಗ ಒತ್ತುವರಿ, ಪ್ಲೆಕ್ಸ್ ಬ್ಯಾನರ್ ತೆರವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್‌ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಆರ್. ತಿಳಿಸಿದ್ದಾರೆ.

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಪಾದಚಾರಿ ಒತ್ತುವರಿ ತೆರವು: ಅದರಂತೆ ಇಂದು ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು.

ಫ್ಲೆಕ್ಸ್ ಬ್ಯಾನರ್ ಗಳ ತೆರವು: ಸಿ.ವಿ.ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಸಹ ತೆರವುಗೊಳಿಸಲಾಯಿತು.

ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಆರೋಗ್ಯ ಪರಿವೀಕ್ಷಕರು ಸೇರಿದಂತೆ ಇನ್ನಿತರರು ಇದ್ದರು.

Leave a Reply

error: Content is protected !!
LATEST
KSRTC 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣದ ಟಿಕೆಟ್‌ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್ ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್ ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟಿಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭ... KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ KSRTC: ಶೇ.15ರಷ್ಟು ಬಸ್‌ ಟಿಕೆಟ್‌ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು ದಲೈವಾಲ ಜೀವಕ್ಕೆ ಅಪಾಯವಾದರೆ ದೇಶದಲ್ಲಿ ರೈತದಂಗೆ ಆಗಲಿದೆ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ