Please assign a menu to the primary menu location under menu

NEWSನಮ್ಮಜಿಲ್ಲೆಬೆಂಗಳೂರು

‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ ಹಮ್ಮಿಕೊಂಡಿದ್ದ ‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗ, ನಾಗರೀಕರು, ವಿದ್ಯಾರ್ಥಿಗಳು, ಸೈಕಲ್, ಕಾಲ್ನಡಿಗೆ ಮೂಲಕ ನಡೆದ ಜಾಥ ಕಾರ್ಯಕ್ರಮದಲ್ಲಿ ಎಲ್.ಇ.ಡಿ ಪರೆದೆಯುಳ್ಳ ವಾಹನದಲ್ಲಿ ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಬಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ರಸ್ತೆಯುದ್ದಕ್ಕೂ ಮತದಾರರಲ್ಲಿ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವರಿಕೆ ಮಾಡಲಾಯಿತು.

ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ ನೀಡುವುದರ ಜೊತೆಗೆ ನೈತಿಕ ಚುನಾವಣೆ ನಡೆಸುವ ಸಂಬಂಧ ಮತದಾರರಿಗಾಗಿ ಹೊರ ತಂದಿರುವ ಸಿ-ವಿಜಿಲ್, ಕೆವೈಸಿ, ಸಕ್ಷಮ್ ತಂತ್ರಾಂಶಗಳು ಸೇರಿದಂತೆ ಮತದಾರರ ಸಹಾಯವಾಣಿ-1950 ಬಗ್ಗೆ ನಾಗರೀಕರಲ್ಲಿ‌ ಅರಿವು ಮೂಡಿಸಲಾಯಿತು.

ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ಹಾಗೂ ಜಾಗೃತಿ ಗೀತೆ: ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಾಗರೀಕರಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು. ಜೊತೆಗೆ ಮತದಾನದ ಕುರಿತು ಜಾಗೃತಿ ಗೀತೆಯನ್ನು ಹಾಡಲಾಯಿತು.

ಮತಗಟ್ಟೆಗಳ ಬಳಿ ಕನಿಷ್ಟ ಸೌಲಭ್ಯಗಳ ಪರಿಶೀಲನೆ: ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ 7 ಮತಗಟ್ಟೆಗಳು ಬರಲಿದ್ದು, ಕನಿಷ್ಟ ಸೌಲಭ್ಯಗಳಿರುವುದನ್ನು ಪರಿಶೀಲಿಸಿ, ಮತದಾನದ ದಿನ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಥ ಸಾಗಿದ ಹಾದಿ: ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ನಿಂದ, ಜಕ್ಕೂರು ಮುಖ್ಯ ರಸ್ತೆ ಮೂಲಕ, ಜಕ್ಕೂರು ವೃತ್ತ, ಶ್ರೀ ಕೆ.ವಿ ಭೈರೇಗೌಡ ವೃತ್ತ, ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಮತಗಟ್ಟೆಯವರೆಗು ಸಾಗಿ ಮತಗಟ್ಟೆಯ ಆವರಣದಲ್ಲಿ “ಚುನಾವಣಾ ಪರ್ವ ದೇಶದ ಗರ್ವ” ಎಂಬ ದ್ಯೇಯ ಒಳಗೊಂಡಿರುವ ಬಾವುಟವನ್ನು ದ್ವಜಾರೋಹಣ ಮಾಡಲಾಯಿತು.

ನಗರದಾದ್ಯಂತ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮ ಆಯೋಜನೆ: ನಗರದಾದ್ಯಂತ ವಾರ್ಡ್ ವಾರು ಅಪರ ಜಿಲ್ಲಾ ಚುನಾವಣಾಧಿಕಾರಿ, ಚು‌ನಾವಣಾಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಜಾಥ ನಡೆಸಿ, ಸ್ಥಳೀಯ ಮತಗಟ್ಟೆ ವ್ಯಾಪ್ತಿಯ ಮತದಾರರೊಂದಿಗೆ ಮತದಾನ ಮಾಡುವ ಮತಗಟ್ಟೆಗೆ ಭೇಟಿ ನೀಡಿ ಮತದಾರರಿಗೆ ಕನಿಷ್ಟ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಲಾಯಿತು‌.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ  ಕಾಂತರಾಜು, ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತ ಮಮತಾ, ಚುನಾವಣಾ ರಾಯಭಾರಿಯಾದ ನೀತು ವನಜಾಕ್ಷಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್