NEWSಆರೋಗ್ಯನಮ್ಮಜಿಲ್ಲೆ

ಬಿಬಿಎಂಪಿ ನಿರ್ಲಕ್ಷ್ಯ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ – ಹಣಕೊಟ್ಟು ಹೊರಗಡೆಯಿಂದ ತಂದು ಕೊಡುವ ಪರಿಸ್ಥಿತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಸಿದವರಿಗೆ ಅನ್ನಹಾಕಬೇಕು ಎಂಬ ಧ್ಯೇಯದೊಂದಿಗೆ ಆರಂಭವಾದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳಹಿಡಿಯುತ್ತಿದೆ. ಈಗ ಬಿಲ್ ಪಾವತಿಸಿಲ್ಲ ಎಂದು ಜಲಮಂಡಳಿ ನೀರಿನ ಸಂಪರ್ಕ ಕಡಿತಗೊಳಿಸಿದೆ. ಹೀಗಾಗಿ ಕ್ಯಾಂಟೀನ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದನ್ನು ಸರಿಪಡಿಸಬೇಕಾದ ಬಿಬಿಎಂಪಿ ನಿದ್ದೆಗೆ ಜಾರಿದೆ. ಇದರಿಂದ ಗ್ರಾಹಕರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಈ ಕ್ಯಾಂಟೀನ್‌ನಲ್ಲಿ ಬಡವರು, ಕೂಲಿ ಕಾರ್ಮಿಕರು ಊಟ ಮಾಡಿ ಹಸಿವು ನೀಗಿಸಿಕೊಳ್ಳುತ್ತಿದ್ದರು. ಆದರೆ ಈಗ ಈ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದರಿಂದ ಈಗ ಇಂದಿರಾ ಕ್ಯಾಂಟೀನ್‌ಗಳು ಬಂದ್ ಆಗುವ ಆತಂಕ ಎದುರಾಗಿದೆ.

ಏಕೆಂದರೆ ಮೆಜೆಸ್ಟಿಕ್‌ನ ಸೇರಿದಂತೆ ನಗರದ ಹಲವು ಇಂದಿರಾ ಕ್ಯಾಂಟೀನ್‌ಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಜಲಮಂಡಳಿಯವರು ನೀರಿನ ಪೈಪ್ ಲೈನ್ ಕಟ್ ಮಾಡಿದ್ದು ನೀರಿಲ್ಲದೆ ಹೊರಗಡೆಯಿಂದ ಹಣಕೊಟ್ಟು ನೀರು ತಂದು ಕ್ಯಾಂಟೀನ್‌ಗಳನ್ನು ನಡೆಸುತ್ತಿದ್ದಾರೆ.

ನಗರದ 8 ವಲಯಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀರಿನ ಬಿಲ್ ಬಾಕಿ ಇದೆ. 40 ಲಕ್ಷಕ್ಕೂ ಹೆಚ್ಚು ನೀರಿನ ಬಿಲ್ ಇದೆ ಎನ್ನಲಾಗಿದೆ. ಈ ಬಗ್ಗೆ ಹಲವು ಬಾರಿ ಬಿಬಿಎಂಪಿ ಗಮನಕ್ಕೆ ತಂದರೂ ಬಿಬಿಎಂಪಿ ಬಿಲ್ ಪಾವತಿಸಿ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ. ಸುಮಾರು ಏಳೆಂಟು ತಿಂಗಳ ಬಿಲ್‌ಗಳು ಬಾಕಿ ಉಳಿದಿವೆ ಎಂದು ಹೇಳಲಾಗುತ್ತಿದೆ.

ಇಂದಿರಾ ಕ್ಯಾಂಟೀನ್‌ಗೆ ಬರುವ ಗ್ರಾಹಕರೂ ಕೂಡ ಇಲ್ಲಿ ಉಂಟಾಗಿರುವ ಸಮಸ್ಯೆ ಹೇಳಿಕೊಳ್ಳುತ್ತದ್ದಾಋೆ. ಊಟ ಚೆನ್ನಾಗಿದೆ, ಇಲ್ಲಿ ಮೂರು ಹೊತ್ತು ಊಟ ಮಾಡುತ್ತೇವೆ. ಆದರೆ ನೀರಿನ ಸಮಸ್ಯೆ ಇದ್ದು, ತೆರವುಗೊಳಿಸಿ ಎಂದು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಇಲ್ಲದೇ ಮುಚ್ಚುವ ಭೀತಿ ಎದುರಾಗಿದ್ದು, ಸರಕಾರ ಹಾಗೂ ಬಿಬಿಎಂಪಿ ನೀರಿನ ಶುಲ್ಕವನ್ನು ಪೂರ್ಣಗೊಳಿಸಿ ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್ ಉಳಿಸಿಕೊಳ್ಳುವುದಕ್ಕೆ ಮುಂದಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...