NEWS

ಪೌರಕಾರ್ಮಿಕರಿಗೆ ಮೂರು ತಿಂಗಳಿನಿಂದ ವೇತನ ನೀಡದ ಬಿಬಿಎಂಪಿ – ಭಿಕ್ಷೆ ಬೇಡುವ ಸ್ಥಿತಿಗೆ ಬಂದ ಪೌರಕಾರ್ಮಿಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನವಿದೆ. ಹೌದು ನಿತ್ಯ ಜನರ ಕೊಳೆ ತೊಳೆಯುವ ಮೂಲಕ ನಗರವನ್ನು ಸ್ವಚ್ಚವಾಗಿ ಇಡುತ್ತಿರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರಕಾರ್ಮಿಕ ಹೊಟ್ಟೆಮೇಲೆ ಬಿಬಿಎಂಪಿ ಅಧಿಕಾರಿಗಳು ಮತ್ತು ಕೆಲ ಗುತ್ತಿಗೆದಾರರು ಹೊಡೆಯುತ್ತಿದ್ದಾರೆ.

ಸರಿಯಾಗಿ ನಿದ್ರೆ ಮಾಡದೆ, ಒಳ್ಳೆಯ ಬಟ್ಟೆಯನ್ನು ಧರಿಸದೆ ನಗರದ ಸ್ವಚ್ಚತೆಯಲ್ಲಿ ತೊಡಗಿ ನಿತ್ಯ ಮನೆ ಮನೆಯಲ್ಲಿ ಕಸ ಸಂಗ್ರಹಿಸಿ ಆಟೋದಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿನಿಂದಲೂ ಸಂಬಳವನ್ನೇ ಕೊಟ್ಟಿಲ್ಲ.

ಸಾಂದರ್ಭಿಕ ಚಿತ್ರ

ಪೌರ ಕಾರ್ಮಿಕರು ಹೇಳುವ ಪ್ರಕಾರ ಕುಮಾರಸ್ವಾಮಿ ಬಡಾವಣೆಯಲ್ಲಿ ಕಸ ವಿಲೇವಾರಿ ಮಾಡುತ್ತಿರುವ 25-30 ಆಟೋ ಟಿಪ್ಪರ್‌ನ ಪೌರ ಕಾರ್ಮಿಕರಿಗೆ ಮೂರು ತಿಂಗಳ ವೇತನವನ್ನು ಇನ್ನೂ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಳ್ಳಲಾಗಿದೆ.

ಈ ಬಗ್ಗೆ ಪೌರಕಾರ್ಮಿಕರು ಅಧಿಕಾರಿಗಳನ್ನು ಕೇಳಿದರೆ ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಸಂಬಂಧಪಟ್ಟ ನಿಮ್ಮ ಗುತ್ತಿಗೆದಾರರನ್ನು ಕೇಳಿ ಎಂದು ಜಾರಿಕೊಳ್ಳುತ್ತಾರಂತೆ. ಇನ್ನು ಗುತ್ತಿಗೆದಾರರನ್ನು ಕೇಳಿದರೆ ಅವರು ಇನ್ನು ಬಿಬಿಎಂಪಿ ಅಧಿಕಾರಿಗಳು ನಮಗೆ ಬಟಾವಡೆ ಮಾಡಿಲ್ಲ ಬಿಬಿಎಂಪಿಯಿಂದ ಹಣ ಹಾಕಿದ ಕೂಡಲೇ ನಿಮಗೆ ಸಂಬಳ ಪಾವತಿಸುತ್ತೇವೆ ಈಗ ಹೋಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದಾರಂತೆ.

ಇದು ಬರಿ ಕುಮಾರಸ್ವಾಮಿ ಬಡಾವಣೆಯಲ್ಲಿ ನಿತ್ಯ ಮನೆಮನೆಯಲ್ಲಿ ಕಸ ಸಂಗ್ರಹಿಸಿ ವಿಲೇವಾರಿ ಮಾಡುತ್ತಿರುವ ಪೌರ ಕಾರ್ಮಿಕರಿಗಷ್ಟೇ ಅಲ್ಲ ಈ ರೀತಿ ಕೆಲವು ವಾರ್ಡ್‌ಗಳಲ್ಲಿ ಇದೆ ಎಂಬ ಆರೋಪ ಕೇಳಿ ಬರುತ್ತಿದೆ. ಜತೆಗೆ ಕೆಲವು ವಾರ್ಡ್‌ಗಳಲ್ಲಿ ತಿಂಗಳಿಗೆ ಸರಿಯಾಗಿ ಸಂಬಳ ಪಾವತಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆದರೆ ಕುಮಾರಸ್ವಾಮಿ ಬಡಾವಣೆಯಲ್ಲಿ ಏಕೆ ರೀತಿ ವೇತನ ಬಿಡುಗಡೆ ಮಾಡಿಲ್ಲ ಎಂಬುವುದಕ್ಕೆ ಅಧಿಕಾರಿಗಳು ಸಮಂಜಸವಾದ ಉತ್ತರ ನೀಡುತ್ತಿಲ್ಲ.

ಇನ್ನು ಕಳೆದ ಮೂರು ತಿಂಗಳಿನಿಂದ ವೇತನವಿಲ್ಲದೆ ಪೌರಕಾರ್ಮಿಕರು ನಿತ್ಯ ಜೀವನಕ್ಕೆ ಬೇಕಾದ ಆಹಾರ ಪದಾರ್ಥಗಳನ್ನು ಕೊಳ್ಳುವುದಕ್ಕೆ ಪರದಾಡುತ್ತಿದ್ದಾರೆ. ಅಲ್ಲದೆ ಮನೆ ಬಾಡಿಗೆಯನ್ನು ಕಟ್ಟಲಾರದೆ ಮನೆ ಮಾಲೀಕರು ಖಾಲೆ ಮಾಡಿ ಎಂದು ಹೇಳುತ್ತಿದ್ದಾರೆ. ಇದರಿಂದ ನಮಗೆ ಜೀವನವೇ ಬೇಡ ಎಂಬಷ್ಟು ಬೇಸತ್ತು ಹೋಗಿದ್ದೇವೆ ಎಂದು ಹೆಸರೇಳಲಿಚ್ಚಿಸದ ಪೌರ ಕಾರ್ಮಿಕರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ನಮಗೆ ತಿಂಗಳಿಗೆ ಸರಿಯಾಗಿ ಸಂಬಳ ಬಂದರೆ ಜೀವನವನ್ನು ಆದಷ್ಟು ಸುಧಾರಿಸಬಹುದು ಇಲ್ಲದಿದ್ದರೆ ನಮ್ಮ ಮನೆಗಳಲ್ಲಿ ನಿತ್ಯ ಮಕ್ಕಳು ಉಪವಾಸ ಮಾಡಬೇಕಿದೆ. ಇಲ್ಲ ಭಿಕ್ಷೆ ಬೇಡಿ ತಿನ್ನಬೇಕಿದೆ ಎಂದು ಪೌರಕಾರ್ಮಿಕರು ತಮ್ಮ ನೋವನ್ನು ವಿಜಯಪಥ.ಇನ್‌ ಜತೆ ತೋಡಿಕೊಂಡಿದ್ದಾರೆ.

ಈಗಲಾದರೂ ಬಿಬಿಎಂಪಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಗುತ್ತಿಗೆದಾರರು ಕೂಡಲೇ ಬಾಕಿ ಇರುವ ಮೂರು ತಿಂಗಳ ವೇತನವನ್ನು ಬಿಡುಗಡೆ ಮಾಡಿ ಪೌರಕಾರ್ಮಿಕರ ಜೀವನ ಸುಧಾರಿಸಲು ಮುಂದಾಗಬೇಕಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು