NEWSಬೆಂಗಳೂರುಸಂಸ್ಕೃತಿ

BBMP ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನಾಚರಣೆಯ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕವಾಯತು ಪ್ರದರ್ಶನಕ್ಕಾಗಿ ಅಗತ್ಯ ಏರ್ಪಾಡುಗಳನ್ನು ಮಾಡಿಕೊಂಡು ಪೊಲೀಸ್ ಇಲಾಖೆಯಿಂದ ಶಿಷ್ಟಾಚಾರದನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುವ ವೇಳೆ ಮೈದಾನದಲ್ಲಿ ಧೂಳು ಏಳುವ ಸಾಧ್ಯತೆಯಿದ್ದು, ಮೈದಾನಕ್ಕೆ ನೀರನ್ನು ನಿಯಮಿತವಾಗಿ ಸಿಂಪಡಿಸಿ ಮಣ್ಣಿನ ಧೂಳು ಏಳದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಯಿತು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ವಲಯ ಆಯುಕ್ತರಾದ   ಸ್ನೇಹಲ್, ಉಪ ಆಯುಕ್ತ  ಮಂಜುನಾಥಸ್ವಾಮಿ, ಪೊಲೀಸ್  ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ