NEWSನಮ್ಮಜಿಲ್ಲೆನಮ್ಮರಾಜ್ಯ

ಬಿಬಿಎಂಪಿ ಶಾಲಾ ಶಿಕ್ಷಕರಿಗೆ ವಿದೇಶ ಪ್ರವಾಸ ಯೋಗ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ ಶಿಕ್ಷಕರು ಇನ್ನು ಬಿಬಿಎಂಪಿ ಪ್ರಾಯೋಜನೆಯಲ್ಲಿ ವಿದೇಶ ಪ್ರವಾಸ ಮಾಡಬಹುದು. ಸುಮ್ಮನೇ ಅಲ್ಲ. ಶಾಲೆಗೆ ನೂರಕ್ಕೆ ನೂರರಷ್ಟು ಫಲಿತಾಂಶ ಬಂದರೆ ಮಾತ್ರ!

ಶಾಲಾ ಫಲಿತಾಂಶವನ್ನು ವೃದ್ಧಿಸಲು ಈ ವಿನೂತನ ಯೋಜನೆ ಕೈಗೊಳ್ಳಲಾಗಿದೆ. ಬಳ್ಳಾರಿಯಲ್ಲಿಯೂ ಹಿಂದೆ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಘೋಷಣೆಯ ಬಳಿಕ 70ರಿಂದ 80 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದವು. ಈ ಪರಿಣಾಮ ನೋಡಿ ಇಲೂ ಯೋಜನೆ ವಿಸ್ತರಿಸಲು ಚಿಂತಿಸಲಾಗಿದೆ.

ಶೇಕಡ ನೂರು ಫಲಿತಾಂಶ ಪಡೆದ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಪ್ರವಾಸದಂತಹ ಕೊಡುಗೆಗಳನ್ನು ನೀಡುವ ಮೂಲಕ ಶೈಕ್ಷಣಿಕತೆಗೆ ಮತ್ತಷ್ಟು ಉತ್ತೇಜನ ನೀಡಲು ಪಾಲಿಕೆ ಮುಂದಾಗಿದ್ದು, ವಿನೂತನ ಯೋಜನೆಯ ರೂಪುರೇಷೆ ರೂಪಿಸಲಾಗುತ್ತಿದೆ.

ಈ ಯೋಜನೆಗೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಉಪಯೋಗಿಸಿಕೊಳ್ಳಲು ಚಿಂತನೆ ನಡೆದಿದ್ದು, ಮೇಲಧಿಕಾರಿಗಳ ಅನುಮತಿ ಸಿಕ್ಕ ಮೇಲೆ ಪ್ರಕಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಆದರೆ ಈ ಯೋಜನೆಗೂ ಮುನ್ನ ಬಿಬಿಎಂಪಿ ಶಾಲೆಗಳಲ್ಲಿನ ಮೂಲಸೌಕರ್ಯ ಉನ್ನತೀಕರಣ, ಪಾತಾಳಕ್ಕಿಳಿದಿರುವ ಹಾಜರಾತಿ ನೋಂದಣಿ ಹೆಚ್ಚಳ, ಮೂಲಭೂತ ಅಗತ್ಯ ಸೌಕರ್ಯಗಳ ಅಳವಡಿಕೆ ಆಗಬೇಕು ಎಂದು ಶಿಕ್ಷಕರು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ