NEWSನಮ್ಮಜಿಲ್ಲೆಬೆಂಗಳೂರು

ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ- ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ಪಶುಪಾಲನಾ ವಿಭಾಗ ಬಿಬಿಎಂಪಿ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ(ABC) ಚಿಕಿತ್ಸೆ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು(ARV) ಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿದೆ ಎಂದರು.

ಇನ್ನು ರೇಬೀಸ್ ಲಸಿಕೆ ಹೊರತು ಪಡಿಸಿ ಬೀದಿನಾಯಿಗಳಲ್ಲಿ ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳನ್ನು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ನಿರ್ವಹಿಸುವುದು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಬೀದಿ ನಾಯಿಗಳಿಗೆ ಐದು ರೋಗಗಳು ತುಂಬಾ ಮಾರಕವಾಗಿವೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು 5 ರೋಗಗಳಿಗೆ ಈ ಸಂಯುಕ್ತ ಲಸಿಕೆಯು ಅತ್ಯವಶ್ಯಕವಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವಂತಹ ನಾಗರಿಕರ ಆರೋಗ್ಯ ಕಾಪಾಡುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ. ಇದೇ ರೀತಿ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳ ಆರೋಗ್ಯ ಕಾಪಾಡವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೀದಿನಾಯಿಗಳಲ್ಲಿ ಕಾಣಿಸಿಕೊಳ್ಳುವಂತಹ ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕುವುದರಿಂದ ಈ ಮಾರಕ ರೋಗಗಳ ಹರಡುವಿಕೆ ಹಾಗೂ ತಡೆಗಟ್ಟುವಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವು ಉಪಯುಕ್ತವಾಗಲಿದೆ ಎಂದರು.

ಪಾಲಿಕೆಯ ವ್ಯಾಪ್ತಿಯಲ್ಲಿ 2023ನೇ ಸಾಲಿನ ಬೀದಿ ನಾಯಿ ಸಮೀಕ್ಷೆಯಲ್ಲಿ ಅಂದಾಜಿಸಲಾಗಿರುವ 2.79 ಲಕ್ಷ ಬೀದಿನಾಯಿಗಳಲ್ಲಿ ಶೇ. 50ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಪ್ರಸಕ್ತ ಸಾಲಿನಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ನಾಯಿಗಳಿಗೆ ಮಾರಕವಾಗಿರುವ ಐದು ರೋಗಗಳ ವಿವರ:
1. ಕೆನೈನ್ ಡಿಸ್ಟೆಂಪರ್(Canine Distemper)
2. ಕೆನೈನ್ ಹೆಪಟೈಟಿಸ್(Canine hepatitis)
3. ಕೆನೈನ್ ಪಾರ್ವವೈರಸ್(Canine Parvovirus)
4. ಕ್ಯಾನೈನ್ ಪ್ಯಾರಾ ಇನ್ಫ್ಲುಯೆನ್ಸ(Canine para influenza)
5. ನಾಯಿಗಳಲ್ಲಿ ಲೆಪ್ಟೊಸ್ಪೈರೋಸಿಸ್(Canine Leptospirosis)-(2 ಸ್ಟೈನ್) (ನಾಯಿಗಳಿಂದ ಮನುಷ್ಯರಿಗೆ ಹರಡಬಹುದಾದ ರೋಗ)

ಈ ವೇಳೆ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ನಿರ್ದೇಶಕರಾದ ಡಾ. ಚಂದ್ರಯ್ಯ, ಎಲ್ಲಾ ವಲಯಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!! KSRTC ಚಾಲನಾ ಸಿಬ್ಬಂದಿಗಳು ಅಮ್ಮನ್.., ಅಕ್ಕನ್.. ಅಂತ ಬೈಸಿಕೊಳ್ಳೋದಕ್ಕೆ ಇರುವವರಲ್ಲ: ಶಿಲ್ಪ ಆರ್‌.ಗೌಡ ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ KSRTC: ಸರಿಸಮಾನ ವೇತನ ಘೋಷಣೆ ಮಾಡಿ ಇಲ್ಲ ತೀವ್ರ ಹೋರಾಟ- ಎಚ್ಚರಿಕೆ ಕೊಟ್ಟ 4 ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರು ಮಂಡ್ಯ: ಆಟವಾಡುತ್ತ ಅಣ್ಣ ಸಿಡಿಸಿದ ಗುಂಡಿಗೆ ಮೂರು ವರ್ಷದ ತಮ್ಮ ಬಲಿ